ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ
ಬೆಂಗಳೂರು, 02 ನವೆಂಬರ್ (ಹಿ.ಸ.): ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ ನೇತೃತ್ವದಲ್ಲಿ ರಾಜ್ಯ ಕೋರ್ ಕಮಿಟಿ ಸಭೆ ನಡೆಯಿತು. ಸಭೆಯಲ್ಲಿ ಪಕ್ಷ ಸಂಘಟನೆಯನ್ನು ಬಲಪಡಿಸುವುದು ಹಾಗೂ ರಾಜ್ಯ ಕಾಂಗ್ರೆಸ್ ಸ
ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ


ಬೆಂಗಳೂರು, 02 ನವೆಂಬರ್ (ಹಿ.ಸ.):

ಬೆಂಗಳೂರಿನ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ಹರೀಶ್ ದ್ವಿವೇದಿ ನೇತೃತ್ವದಲ್ಲಿ ರಾಜ್ಯ ಕೋರ್ ಕಮಿಟಿ ಸಭೆ ನಡೆಯಿತು.

ಸಭೆಯಲ್ಲಿ ಪಕ್ಷ ಸಂಘಟನೆಯನ್ನು ಬಲಪಡಿಸುವುದು ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನಿರ್ಣಯಗಳ ವಿರುದ್ಧ ಮುಂದಿನ ದಿನಗಳಲ್ಲಿ ಹೋರಾಟ ರೂಪಿಸುವ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು ಎಂದು ರಾಜ್ಯಾಧ್ಯಕ್ಷ ವಿಜಯೇಂದ್ರ ತಿಳಿಸಿದ್ದಾರೆ.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಪಕ್ಷದ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ರಾಷ್ಟ್ರೀಯ ಉಪಾಧ್ಯಕ್ಷ ಮತ್ತು ಸಂಸದ ಮಾ. ನಾಗರಾಜು, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಬಿ. ಶ್ರೀರಾಮುಲು, ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ನಳಿನ್‌ಕುಮಾರ್ ಕಟೀಲ್, ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಸಭೆಯಲ್ಲಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande