ಚಿನ್ನ, ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ
ನವದೆಹಲಿ, 02 ನವೆಂಬರ್ (ಹಿ.ಸ.): ದೇಶೀಯ ಚಿನ್ನಾಭರಣ ಮಾರುಕಟ್ಟೆಯಲ್ಲಿ ವಾರದ ಮೊದಲ ದಿನವಾದ ಸೋಮವಾರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ ಕಂಡುಬಂದಿದೆ. ಬೆಲೆ ಇಳಿಕೆಯ ಹಿನ್ನೆಲೆಯಲ್ಲಿ ದೇಶದ ವಿವಿಧ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 1,38,870 ರೂ.ನಿಂ
प्रतीकात्मक


ನವದೆಹಲಿ, 02 ನವೆಂಬರ್ (ಹಿ.ಸ.):

ದೇಶೀಯ ಚಿನ್ನಾಭರಣ ಮಾರುಕಟ್ಟೆಯಲ್ಲಿ ವಾರದ ಮೊದಲ ದಿನವಾದ ಸೋಮವಾರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಅಲ್ಪ ಇಳಿಕೆ ಕಂಡುಬಂದಿದೆ.

ಬೆಲೆ ಇಳಿಕೆಯ ಹಿನ್ನೆಲೆಯಲ್ಲಿ ದೇಶದ ವಿವಿಧ ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 1,38,870 ರೂ.ನಿಂದ 1,39,020 ರೂ.ವರೆಗೆ ವಹಿವಾಟು ನಡೆಸುತ್ತಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 1,27,290 ರೂ.ನಿಂದ 1,27,440 ರೂ.ವರೆಗೆ ಇದೆ. ದೆಹಲಿ ಮಾರುಕಟ್ಟೆಯಲ್ಲಿ ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 1,99,900 ರೂ.ನಷ್ಟಿದೆ.

ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 1,39,020 ರೂ. ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆ 1,27,440 ರೂ. ಇದೆ. ಮುಂಬೈನಲ್ಲಿ ಕ್ರಮವಾಗಿ 1,38,870 ರೂ. ಮತ್ತು 1,27,290 ರೂ. ಇದ್ದರೆ, ಅಹಮದಾಬಾದ್‌ನಲ್ಲಿ 24 ಕ್ಯಾರೆಟ್ ಚಿನ್ನ 1,38,920 ರೂ. ಹಾಗೂ 22 ಕ್ಯಾರೆಟ್ ಚಿನ್ನ 1,27,340 ರೂ.ಗೆ ಮಾರಾಟವಾಗುತ್ತಿದೆ.

ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 1,38,870 ರೂ. ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆ 1,27,290 ರೂ. ಇದೆ. ಭೋಪಾಲ್ ಮತ್ತು ಪಾಟ್ನಾದಲ್ಲಿ ಕ್ರಮವಾಗಿ 1,38,920 ರೂ. ಹಾಗೂ 1,27,340 ರೂ. ದರವಿದೆ. ಜೈಪುರ ಮತ್ತು ಲಖನೌನಲ್ಲಿ 24 ಕ್ಯಾರೆಟ್ ಚಿನ್ನ 1,39,020 ರೂ. ಹಾಗೂ 22 ಕ್ಯಾರೆಟ್ ಚಿನ್ನ 1,27,440 ರೂ.ಗೆ ವಹಿವಾಟು ನಡೆಸುತ್ತಿದೆ.

ಕರ್ನಾಟಕ, ತೆಲಂಗಾಣ ಮತ್ತು ಒಡಿಶಾ ರಾಜ್ಯಗಳಲ್ಲಿಯೂ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆ ದಾಖಲಾಗಿದೆ. ಈ ರಾಜ್ಯಗಳ ರಾಜಧಾನಿಗಳಾದ ಬೆಂಗಳೂರು, ಹೈದರಾಬಾದ್ ಮತ್ತು ಭುವನೇಶ್ವರದಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 1,38,870 ರೂ. ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆ 1,27,290 ರೂ. ಇದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande