ದಾವಣಗೆರೆಯಲ್ಲಿ ಟಿಸಿ ಸ್ಫೋಟ ಶಂಕೆ: ಗುಜರಿ ಅಂಗಡಿಗೆ ಬೆಂಕಿ,ಒಂದು ವಾಹನ ಸೇರಿ ಅಪಾರ ವಸ್ತುಗಳು ಭಸ್ಮ
ದಾವಣಗೆರೆ, 02 ನವೆಂಬರ್ (ಹಿ.ಸ.): ದಾವಣಗೆರೆ ನಗರದ ವಿದ್ಯಾರ್ಥಿ ಭವನದ ಬಳಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ವಿದ್ಯುತ್ ಪರಿವರ್ತಕ (ಟಿಸಿ) ಹಾಗೂ ಪಕ್ಕದಲ್ಲಿದ್ದ ಗುಜರಿ ಅಂಗಡಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ವಿದ್ಯುತ್ ಟಿಸಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಬೆಂಕಿ ಹೊತ್ತಿಕೊಂಡಿರಬಹುದು ಎಂದ
Davanagere-Fire-Accident-Transformer-Blast-Scrap-Shop-Damaged


ದಾವಣಗೆರೆ, 02 ನವೆಂಬರ್ (ಹಿ.ಸ.):

ದಾವಣಗೆರೆ ನಗರದ ವಿದ್ಯಾರ್ಥಿ ಭವನದ ಬಳಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ವಿದ್ಯುತ್ ಪರಿವರ್ತಕ (ಟಿಸಿ) ಹಾಗೂ ಪಕ್ಕದಲ್ಲಿದ್ದ ಗುಜರಿ ಅಂಗಡಿ ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ವಿದ್ಯುತ್ ಟಿಸಿಯಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಟಿಸಿಯಲ್ಲಿ ಕಾಣಿಸಿಕೊಂಡ ಬೆಂಕಿ ಪಕ್ಕದಲ್ಲಿದ್ದ ಗುಜರಿ ಅಂಗಡಿಗೆ ವ್ಯಾಪಿಸಿದ್ದು, ಅಂಗಡಿಯಲ್ಲಿದ್ದ ವಸ್ತುಗಳು ಹೊತ್ತಿ ಉರಿದಿವೆ.

ಪರಿಣಾಮ ಸ್ಥಳದಲ್ಲಿ ದಟ್ಟ ಹೊಗೆ ಆಗಸದೆತ್ತರಕ್ಕೆ ಆವರಿಸಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಅಂಗಡಿಯಲ್ಲಿದ್ದ ಟಾಟಾ ಏಸ್ ವಾಹನ, ಸ್ಕೂಟಿ ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಸ್ಥಳೀಯರು ಆತಂಕಗೊಂಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಟಿಸಿ ಸ್ಫೋಟವೇ ಬೆಂಕಿ ಅವಘಡಕ್ಕೆ ಕಾರಣವೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಬೆಂಕಿಯಿಂದ ಉಂಟಾದ ನಷ್ಟದ ನಿಖರ ಪ್ರಮಾಣ ಇನ್ನಷ್ಟೇ ತಿಳಿದುಬರಬೇಕಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande