ವಾಣಿ ವಿಲಾಸ ಸಾಗರಕ್ಕೆ 1 ಟಿಎಂಸಿ ನೀರು ಹರಿಸಲು ಆದೇಶ: ದಾವಣಗೆರೆಯಲ್ಲಿ ರೈತರ ಆಕ್ರೋಶ
ದಾವಣಗೆರೆ, 02 ನವೆಂಬರ್ (ಹಿ.ಸ.): ಭದ್ರಾ ಜಲಾಶಯದಿಂದ ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ ಸಾಗರಕ್ಕೆ 1 ಟಿಎಂಸಿ ನೀರು ಹರಿಸುವಂತೆ ಆದೇಶ ಹೊರಡಿಸಿರುವುದಕ್ಕೆ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದೇಶವನ್ನು ತಕ್ಷಣ ಹಿಂಪಡೆಯುವಂತೆ ಒತ್ತಾಯಿಸಿ ದಾವಣಗೆರೆಯಲ್ಲ
Farmers-Protest-Against-1-TMC-Water-Release-To-Vani-Vilas-Sagar-In-Davanagere


ದಾವಣಗೆರೆ, 02 ನವೆಂಬರ್ (ಹಿ.ಸ.):

ಭದ್ರಾ ಜಲಾಶಯದಿಂದ ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ ಸಾಗರಕ್ಕೆ 1 ಟಿಎಂಸಿ ನೀರು ಹರಿಸುವಂತೆ ಆದೇಶ ಹೊರಡಿಸಿರುವುದಕ್ಕೆ ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದೇಶವನ್ನು ತಕ್ಷಣ ಹಿಂಪಡೆಯುವಂತೆ ಒತ್ತಾಯಿಸಿ ದಾವಣಗೆರೆಯಲ್ಲಿ ರೈತರು ಪ್ರತಿಭಟನೆ ನಡೆಸಿದ್ದು, ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.

ಈಗಾಗಲೇ ಭದ್ರಾ ಅಚ್ಚುಕಟ್ಟು ವ್ಯಾಪ್ತಿಗೆ 3 ಟಿಎಂಸಿ ನೀರು ಹರಿಸಲಾಗಿದೆ. ಇಂತಹ ಸಂದರ್ಭದಲ್ಲಿ ಮತ್ತೆ 1 ಟಿಎಂಸಿ ನೀರನ್ನು ವಾಣಿ ವಿಲಾಸ ಸಾಗರಕ್ಕೆ ಹರಿಸಲು ಆದೇಶಿಸಿರುವುದು ಸರಿಯಲ್ಲ.

ಇದರಿಂದ ಅಚ್ಚುಕಟ್ಟು ಪ್ರದೇಶದ ರೈತರ ಹಿತಾಸಕ್ತಿಗೆ ಧಕ್ಕೆಯಾಗಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾರಿಗನೂರು, ಹರಿಹರ ಹಾಗೂ ಮಲೆಬೆನ್ನೂರು ಭಾಗದ ರೈತರು ಬೈಕ್ ರ್ಯಾಲಿ ಮೂಲಕ ದಾವಣಗೆರೆಗೆ ಆಗಮಿಸಿದ್ದು, ಶಾಮನೂರು ಬ್ರಿಡ್ಜ್ನಿಂದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ನಿವಾಸದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ನೀರು ಹರಿಸುವ ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯಿಸಿದ್ದಾರೆ.

ರೈತರ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಚಿವರ ನಿವಾಸದ ಸುತ್ತಮುತ್ತ ಪೊಲೀಸ್ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಸಚಿವರ ಮನೆಗೆ ತೆರಳುವ ರಸ್ತೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande