ಕಲಬುರಗಿಯಲ್ಲಿ ಮೂರನೇ ದಿನವೂ ಮುಂದುವರಿದ ರೈತರ ಹೋರಾಟ
ಕಲಬುರಗಿ, 02 ನವೆಂಬರ್ (ಹಿ.ಸ.): ವಿವಿಧ ಬೆಳೆಗಳಿಗೆ ಸೂಕ್ತ ಬೆಲೆ ನೀಡುವಂತೆ ಆಗ್ರಹಿಸಿ ಕಲಬುರಗಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ನಗರದ ರಾಮಮಂದಿರ ವೃತ್ತದಲ್ಲಿ ಕಲಬುರಗಿ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಸಿಲಿನ
Kalaburagi-Farmers-Protest-Enters-Third-Day-Demanding-Rs-5500-Sugarcane-Support-Price


ಕಲಬುರಗಿ, 02 ನವೆಂಬರ್ (ಹಿ.ಸ.):

ವಿವಿಧ ಬೆಳೆಗಳಿಗೆ ಸೂಕ್ತ ಬೆಲೆ ನೀಡುವಂತೆ ಆಗ್ರಹಿಸಿ ಕಲಬುರಗಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ.

ನಗರದ ರಾಮಮಂದಿರ ವೃತ್ತದಲ್ಲಿ ಕಲಬುರಗಿ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಸಿಲಿನ ತಾಪವನ್ನೂ ಲೆಕ್ಕಿಸದೆ ರೈತರು ತಮ್ಮ ಬೇಡಿಕೆ ಈಡೇರುವವರೆಗೂ ಹೋರಾಟ ಮುಂದುವರಿಸುವ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕಬ್ಬಿಗೆ ಪ್ರತಿ ಟನ್ಗೆ 5,500 ರೂಪಾಯಿ ಬೆಂಬಲ ಬೆಲೆ ನೀಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಇದರ ಜೊತೆಗೆ ತೊಗರಿ ಮತ್ತು ಹತ್ತಿ ಬೆಳೆಗಳಿಗೆ ಪ್ರತಿ ಕ್ವಿಂಟಾಲ್ಗೆ 15 ಸಾವಿರ ರೂಪಾಯಿ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಬೆಲೆ ಸಿಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ಕೃಷಿ ಉತ್ಪನ್ನಗಳ ಬೆಲೆ ನಿಗದಿಯಲ್ಲಿ ರೈತರ ಹಿತಾಸಕ್ತಿಗೆ ಆದ್ಯತೆ ನೀಡಬೇಕು.

ಸರ್ಕಾರ ರೈತರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಸ್ಪಂದಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಈ ಕುರಿತು ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ಬಸವರಾಜ್ ಕೋರಿ, ರೈತರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು.

ಬೆಳೆಗಳಿಗೆ ವೈಜ್ಞಾನಿಕ ಬೆಲೆ ದೊರೆಯದಿದ್ದರೆ ರೈತರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಲಿದೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಸಂಘಟನೆಯ ಜಿಲ್ಲಾಧ್ಯಕ್ಷ ಮಹಾಂತೇಶ್ ಗೌಡ ನಂದಿಹಳ್ಳಿ ಮಾತನಾಡಿ, ರೈತರ ಸಮಸ್ಯೆಗಳಿಗೆ ಸರ್ಕಾರ ತಕ್ಷಣ ಪರಿಹಾರ ಕಲ್ಪಿಸಬೇಕು.

ಕಬ್ಬು, ತೊಗರಿ ಹಾಗೂ ಹತ್ತಿ ಬೆಳೆಗಳಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಎಚ್ಚರಿಕೆ ನೀಡಿದರು.

ಮೂರನೇ ದಿನವೂ ರೈತರು ರಸ್ತೆಗಿಳಿದು ಪ್ರತಿಭಟನೆ ಮುಂದುವರಿಸಿರುವುದರಿಂದ ರಾಮಮಂದಿರ ವೃತ್ತ ಹಾಗೂ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande