
ಧಾರವಾಡ, 02 ನವೆಂಬರ್ (ಹಿ.ಸ.):
ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ವ್ಯಕ್ತಿಗಳು ಹಾಗೂ ಸಂಸ್ಥೆಗಳಿಗೆ ನೀಡುವ ರಾಜ್ಯ ಪ್ರಶಸ್ತಿ-2026ಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಡಿಸೆಂಬರ್ 3ರಂದು ನಡೆಯಲಿರುವ ರಾಜ್ಯಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಅರ್ಹರು ನವೆಂಬರ್ 10ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು (ಎಂ.ಆರ್.ಡಬ್ಲ್ಯೂ) ಅಥವಾ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ 0836-2744474 ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.