ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಪರಿಶೀಲಿಸಿದ ಶಾಸಕ ಕೋನರೆಡ್ಡಿ
ಧಾರವಾಡ, 02 ನವೆಂಬರ್ (ಹಿ.ಸ.): ನವಲಗುಂದ ವಿಧಾನಸಭಾ ಕ್ಷೇತ್ರದ ಯಮನೂರು ಗ್ರಾಮಕ್ಕೆ ಶಾಸಕ ಎನ್.ಎಚ್. ಕೋನರೆಡ್ಡಿ ಭೇಟಿ ನೀಡಿ, ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಹಾಗೂ ಶ್ರೀ ಚಾಂಗದೇವರ ಆರತಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಯಮನೂರು ಗ್ರಾಮದ ಜನರು ಬೆಣ್ಣೆಹಳ್ಳದ ಪ್ರವಾಹದಿಂದ ಎದುರಿಸುತ್
ಪರಿಶೀಲನೆ


ಧಾರವಾಡ, 02 ನವೆಂಬರ್ (ಹಿ.ಸ.):

ನವಲಗುಂದ ವಿಧಾನಸಭಾ ಕ್ಷೇತ್ರದ ಯಮನೂರು ಗ್ರಾಮಕ್ಕೆ ಶಾಸಕ ಎನ್.ಎಚ್. ಕೋನರೆಡ್ಡಿ ಭೇಟಿ ನೀಡಿ, ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಹಾಗೂ ಶ್ರೀ ಚಾಂಗದೇವರ ಆರತಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು.

ಯಮನೂರು ಗ್ರಾಮದ ಜನರು ಬೆಣ್ಣೆಹಳ್ಳದ ಪ್ರವಾಹದಿಂದ ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ವೀಕ್ಷಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಗ್ರಾಮಸ್ಥರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಜನರ ಸುರಕ್ಷತೆ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಅಭಿವೃದ್ಧಿ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ, ದೀರ್ಘಕಾಲ ಬಾಳಿಕೆ ಬರುವಂತೆ ಪೂರ್ಣಗೊಳಿಸಬೇಕು. ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಶಾಸಕರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ತಹಶೀಲ್ದಾರ್ ಸುಧೀರ ಸಾವಕಾರ, ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರವೀಂದ್ರಗೌಡ ಪಾಟೀಲ, ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande