
ಕಲಬುರಗಿ, 02 ನವೆಂಬರ್ (ಹಿ.ಸ.):
ಲಾರಿ ಹರಿದು ನಾಲ್ಕು ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ನಡೆದಿದೆ. ಓಂಕಾರ (4) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.
ಮಗುವಿನ ಸಾವಿನಿಂದ ಆಕ್ರೋಶಗೊಂಡ ಪೋಷಕರು ಹಾಗೂ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಅಪಘಾತಕ್ಕೆ ಕಾರಣವಾದ ಲಾರಿ ಚಾಲಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಪ್ರತಿಭಟನಾಕಾರರ ಮನವೊಲಿಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.
ಈ ಘಟನೆ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R