ಕರ್ನಾಟಕ ಕಾಂಗ್ರೆಸ್ ಗೆ ನೂತನ ಎಐಸಿಸಿ ಉಸ್ತುವಾರಿಗಳ ನೇಮಕ
ಬೆಂಗಳೂರು, 20 ನವೆಂಬರ್ (ಹಿ.ಸ.): ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಎಐಸಿಸಿ ಉಸ್ತುವಾರಿಗಳಾಗಿ ನೇಮಕಗೊಂಡಿರುವ ಶ್ರೀಮತಿ ಡಿ. ನೆಟ್ಟಾ, ಮೋಹನ್ ಜೋಶಿ, ಹುಸೇನಿ ಹಾಗೂ ವಕೀಲ ಶರತ್ ಎಸ್. ಅವರಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅಭಿನಂದನೆ ಸಲ್ಲಿಸಿ, ಕರ್ನಾಟಕಕ್ಕೆ ಆತ್ಮೀಯ ಸ್ವಾಗತ
ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಎಕ್ಸ್ ಪೋಸ್ಟ್


ಬೆಂಗಳೂರು, 20 ನವೆಂಬರ್ (ಹಿ.ಸ.):

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಎಐಸಿಸಿ ಉಸ್ತುವಾರಿಗಳಾಗಿ ನೇಮಕಗೊಂಡಿರುವ ಶ್ರೀಮತಿ ಡಿ. ನೆಟ್ಟಾ, ಮೋಹನ್ ಜೋಶಿ, ಹುಸೇನಿ ಹಾಗೂ ವಕೀಲ ಶರತ್ ಎಸ್. ಅವರಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅಭಿನಂದನೆ ಸಲ್ಲಿಸಿ, ಕರ್ನಾಟಕಕ್ಕೆ ಆತ್ಮೀಯ ಸ್ವಾಗತ ಕೋರಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಪಕ್ಷದ ವರಿಷ್ಠರ ನಿರ್ದೇಶನದಂತೆ ನೂತನ ಉಸ್ತುವಾರಿಗಳೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ.

ನೂತನ ಉಸ್ತುವಾರಿಗಳ ಅನುಭವ ಮತ್ತು ಸಹಕಾರದೊಂದಿಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸೋಣ ಎಂದು ಅವರು ಸಂದೇಶದಲ್ಲಿ ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande