ನಾಲ್ಕನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಧರಣಿ
ಬೆಂಗಳೂರು, 20 ನವೆಂಬರ್ (ಹಿ.ಸ.): ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಗೌರವಧನವನ್ನು 15 ಸಾವಿರ ರೂಪಾಯಿಗೆ ಹೆಚ್ಚಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್
ಪ್ರತಿಭಟನೆಯ ಫೈಲ್ ಪೋಟೋ


ಬೆಂಗಳೂರು, 20 ನವೆಂಬರ್ (ಹಿ.ಸ.):

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಗೌರವಧನವನ್ನು 15 ಸಾವಿರ ರೂಪಾಯಿಗೆ ಹೆಚ್ಚಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾರ್ಯಕರ್ತೆಯರು ಹೋರಾಟ ಮುಂದುವರಿಸಿದ್ದಾರೆ.

ಕೊರೆಯುವ ಚಳಿಯ ನಡುವೆಯೂ ಪುಟ್ಟ ಮಕ್ಕಳೊಂದಿಗೆ ಪ್ರತಿಭಟನಾ ಸ್ಥಳದಲ್ಲೇ ಆಶಾ ಕಾರ್ಯಕರ್ತೆಯರು ರಾತ್ರಿ ಕಳೆಯುತ್ತಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿಭಟನೆ ಕೈಬಿಡುವಂತೆ ಆಶಾ ಕಾರ್ಯಕರ್ತೆಯರಲ್ಲಿ ಮನವಿ ಮಾಡಿದ್ದು, ಸರ್ಕಾರದ ಆರ್ಥಿಕ ಸ್ಥಿತಿಯನ್ನು ಅರ್ಥಮಾಡಿಕೊಳ್ಳುವಂತೆ ಕೋರಿದ್ದಾರೆ. ಪ್ರೋತ್ಸಾಹಧನ ಸೇರಿದಂತೆ ಪ್ರಸ್ತುತ 8 ಸಾವಿರ ರೂಪಾಯಿ ನೀಡಲಾಗುತ್ತಿದೆ. ಬೇಡಿಕೆಗಳ ಕುರಿತು ಒಂದೇ ದಿನದಲ್ಲಿ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಆದರೆ, ಮುಖ್ಯಮಂತ್ರಿಗಳ ಮನವಿಗೆ ಒಪ್ಪದ ಪ್ರತಿಭಟನಾಕಾರರು, ತಮ್ಮ ಬೇಡಿಕೆಗಳ ಈಡೇರಿಕೆ ಕುರಿತು ಸರ್ಕಾರ ಲಿಖಿತ ಭರವಸೆ ನೀಡುವವರೆಗೂ ಹೋರಾಟ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಲಿಖಿತ ಭರವಸೆ ದೊರೆಯುವವರೆಗೂ ಅಹೋರಾತ್ರಿ ಧರಣಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande