
ಬೆಂಗಳೂರು, 20 ನವೆಂಬರ್ (ಹಿ.ಸ.):
ಜಗಜ್ಯೋತಿ ಬಸವಣ್ಣನವರು ಮಹಾನ್ ಮಾನವತಾವಾದಿಯಾಗಿದ್ದು, ಅವರ ತತ್ವಗಳು ಸಾರ್ವಕಾಲಿಕ ಪ್ರಸ್ತುತವಾಗಿವೆ. ವಿಶ್ವಮಾನವರಾದ ಬಸವಣ್ಣನವರ ವಿಚಾರಗಳನ್ನು ಎಲ್ಲರೂ ಗೌರವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಸವಣ್ಣನವರ ಕುರಿತು ಲೇಖಕ ರವಿ ಹಂಜ್ ಬರೆದಿರುವ 'ಬಸವ ಮಂಟಪ' ಪುಸ್ತಕದಲ್ಲಿ ಅವರ ಬಗ್ಗೆ ಅವಹೇಳನಕಾರಿಯಾಗಿ ಬರೆಯಲಾಗಿದೆ. ಇದು ಇಡೀ ಮಾನವ ಕುಲಕ್ಕೆ ಮಾಡಿದ ಅವಮಾನವಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸಂಶೋಧನೆಯ ಹೆಸರಿನಲ್ಲಿ ಪೂರ್ವಾಗ್ರಹಪೀಡಿತರಾಗಿ ಲೇಖಕರು ಬರಹಗಳನ್ನು ರಚಿಸಿರುವುದನ್ನು ಯಾರೂ ಒಪ್ಪಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಲೇಖಕರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಹಾಗೂ ವಿವಾದಿತ ಪುಸ್ತಕವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ಅಲ್ಲದೆ, ಈ ವಿಚಾರದಲ್ಲಿ ಸರ್ಕಾರ ಲೇಖಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಸವರಾಜ ಬೊಮ್ಮಾಯಿ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಿಸಿರುವ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.