
ಬಳ್ಳಾರಿ, 20 ನವೆಂಬರ್ (ಹಿ.ಸ.)
ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನವೆಂಬರ್ 21ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.
ಹಾಲೀಸ್ ಬ್ಲೂ ಸ್ಟೀಲ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಖಾಲಿ ಇರುವ 30ಕ್ಕೂ ಹೆಚ್ಚು ಹುದ್ದೆಗಳನ್ನು ಈ ಸಂದರ್ಶನದ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಹಾಗೂ ಅರ್ಹ ಪುರುಷ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಸಂದರ್ಶನಕ್ಕೆ ಯಾವುದೇ ಶುಲ್ಕ ಇರುವುದಿಲ್ಲ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
ವಿದ್ಯಾರ್ಹತೆ ಮತ್ತು ವಯೋಮಿತಿ
ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ (ಉತ್ತೀರ್ಣ ಅಥವಾ ಅನುತ್ತೀರ್ಣ), ಐಟಿಐ (ಫಿಟ್ಟರ್ ಮತ್ತು ವೆಲ್ಡರ್) ಅಥವಾ ಮೆಕ್ಯಾನಿಕಲ್ ವಿಭಾಗದಲ್ಲಿ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳ ವಯಸ್ಸು 28 ವರ್ಷ ಮೀರಿರಬಾರದು. ಪುರುಷ ಅಭ್ಯರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಸಂದರ್ಶನದ ಸ್ಥಳ ಮತ್ತು ಅಗತ್ಯ ದಾಖಲೆಗಳು
ಡಿ. ಹಿರೇಹಾಳ್‌ನಲ್ಲಿರುವ ಹಾಲೀಸ್ ಬ್ಲೂ ಸ್ಟೀಲ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ಆವರಣದಲ್ಲಿ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ಆಧಾರ್ ಕಾರ್ಡ್ ಪ್ರತಿ ಹಾಗೂ ಸ್ವವಿವರದ ಪ್ರತಿಯನ್ನು ಕಡ್ಡಾಯವಾಗಿ ತರಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಅಥವಾ 7619207762, 7676774293 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್