
ಹಾಸನ, 20 ನವೆಂಬರ್ (ಹಿ.ಸ.):
ಹಾಸನ ಜಿಲ್ಲೆಯ ಅರಸೀಕೆರೆ ನಗರದ ಜೇನುಕಲ್ ಆಸ್ಪತ್ರೆಯ ನೂತನ ಕಟ್ಟಡವನ್ನು ಅಬಕಾರಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅರಸೀಕೆರೆ ಭಾಗದಲ್ಲಿ ತಾಯಿ ಮತ್ತು ಮಕ್ಕಳಿಗಾಗಿ ಸುಸಜ್ಜಿತ ಆಸ್ಪತ್ರೆಯ ಅಗತ್ಯ ಬಹಳ ದಿನಗಳಿಂದ ಇತ್ತು. ನೂತನ ಆಸ್ಪತ್ರೆ ಕಟ್ಟಡದಿಂದ ಈ ಅಗತ್ಯ ಈಡೇರಿದಂತಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಿರಿಗೆರೆಯ ತರಳಬಾಳು ಜಗದ್ಗುರು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ, ಯಳನಾಡು ಮಹಾಸಂಸ್ಥಾನ ಮಠದ ಜ್ಞಾನಪ್ರಭು ಸಿದ್ದರಾಮ ದೇಶಿಕೇಂದ್ರ ಮಹಾಸ್ವಾಮೀಜಿ ಸೇರಿದಂತೆ ವಿವಿಧ ಮಠಗಳ ಧರ್ಮಗುರುಗಳು, ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.