
ಬಳ್ಳಾರಿ, 20 ನವೆಂಬರ್ (ಹಿ.ಸ.)
ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ನವೆಂಬರ್ 25 ರಂದು ಬಳ್ಳಾರಿಯ ಹೊಸ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ನಿರ್ವಾಹಕ ಘಟಕದ ವತಿಯಿಂದ ನಡೆಯಲಿರುವ ಈ ಶಿಬಿರದಲ್ಲಿ ವಿವಿಧ ಸಂಘ-ಸಂಸ್ಥೆಗಳು, ರೋಟರಿ ಕ್ಲಬ್, ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆ, ಗೃಹರಕ್ಷಕ ದಳ, ಎಲ್ಲಾ ಸರ್ಕಾರಿ ಹಾಗೂ ವಿವಿಧ ಇಲಾಖೆಗಳ ಸಿಬ್ಬಂದಿ ಮತ್ತು ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವಂತೆ ಜಿಲ್ಲಾ ಹೆಚ್.ಐ.ವಿ/ಏಡ್ಸ್ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ ವಿ ಅವರು ಮನವಿ ಮಾಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್