ಮಲ್ಲೇಶ್ವರಂ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ
ಬೆಂಗಳೂರು, 20 ನವೆಂಬರ್ (ಹಿ.ಸ.): ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ನಾಗರಿಕ ಸಮಸ್ಯೆಗಳು, ಆದ್ಯತೆಯ ಕಾಮಗಾರಿಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತು ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಸಭಾಂಗಣದಲ್ಲಿ ಇಂದು ಪರಿಶೀಲನಾ ಸಭೆ ನಡೆಯಿತು. ಪಾಲಿಕೆಯ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರ ಅಧ್ಯಕ್ಷತೆಯಲ್ಲಿ
ಮಲ್ಲೇಶ್ವರಂ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ


ಬೆಂಗಳೂರು, 20 ನವೆಂಬರ್ (ಹಿ.ಸ.):

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ನಾಗರಿಕ ಸಮಸ್ಯೆಗಳು, ಆದ್ಯತೆಯ ಕಾಮಗಾರಿಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತು ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಸಭಾಂಗಣದಲ್ಲಿ ಇಂದು ಪರಿಶೀಲನಾ ಸಭೆ ನಡೆಯಿತು.

ಪಾಲಿಕೆಯ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಉಪಸ್ಥಿತರಿದ್ದರು.

ಸಭೆಯಲ್ಲಿ ಮಲ್ಲೇಶ್ವರಂ ಕ್ಷೇತ್ರದ ವಿವಿಧೆಡೆ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳು, ಪ್ರಸ್ತಾವಿತ ಯೋಜನೆಗಳು ಹಾಗೂ ಪ್ರಮುಖ ನಾಗರಿಕ ಸೌಲಭ್ಯಗಳ ಕುರಿತು ಚರ್ಚಿಸಲಾಯಿತು. ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವುದು ಮತ್ತು ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗೊಳಿಸುವ ಕುರಿತು ಸಮಾಲೋಚನೆ ನಡೆಸಲಾಯಿತು.

ಸಭೆಗೂ ಮುನ್ನ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರೊಂದಿಗೆ ಪಾಲಿಕೆಯ ಕಚೇರಿ ಕಟ್ಟಡವನ್ನು ಪರಿಶೀಲಿಸಿದರು. ಕಟ್ಟಡದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಸ್ತಾವಿತ ಕಾಮಗಾರಿಗಳನ್ನು ಪರಿಶೀಲಿಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಹೆಚ್ಚುವರಿ ಆಯುಕ್ತೆ (ಅಭಿವೃದ್ಧಿ) ಕವಿತಾ ರಾಜಾರಾಂ, ಉಪ ಆಯುಕ್ತೆ (ಆಡಳಿತ) ಸೈಯದಾ ಅಫ್ರೀನ್ ಬಾನು ಎಸ್. ಬಳ್ಳಾರಿ, ಜಂಟಿ ಆಯುಕ್ತೆ ಡಾ. ಶ್ರುತಿ ಎಂ.ಕೆ., ಮುಖ್ಯ ಎಂಜಿನಿಯರ್‌ಗಳು, ಆರೋಗ್ಯಾಧಿಕಾರಿ, ವಿವಿಧ ಇಲಾಖೆಗಳ ಮುಖ್ಯಸ್ಥರು, ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande