ಹನುಮಂತಪ್ಪ ಕೊಲೆ ಪ್ರಕರಣ: ನ್ಯಾಯಕ್ಕಾಗಿ ಸಿರುಗುಪ್ಪದಲ್ಲಿ ಭಾರೀ ಪ್ರತಿಭಟನೆ
ಸಿರುಗುಪ್ಪ, 20 ನವೆಂಬರ್ (ಹಿ.ಸ.) ತೆಕ್ಕಲಕೋಟೆಯಲ್ಲಿ ಕೊಲೆಯಾಗಿರುವ ಯುವಕ ಎಸ್. ಹನುಮಂತಪ್ಪ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸಿರುಗುಪ್ಪ ನಗರದಲ್ಲಿ ಶುಕ್ರವಾರ ಭಾರೀ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಕೊಲೆ ಪ್ರಕರಣವನ್ನು ಖಂಡಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ
ಎಸ್. ಹನುಮಂತಪ್ಪ ಕೊಲೆ : ಖಂಡನೆ


ಎಸ್. ಹನುಮಂತಪ್ಪ ಕೊಲೆ : ಖಂಡನೆ


ಎಸ್. ಹನುಮಂತಪ್ಪ ಕೊಲೆ : ಖಂಡನೆ


ಸಿರುಗುಪ್ಪ, 20 ನವೆಂಬರ್ (ಹಿ.ಸ.)

ತೆಕ್ಕಲಕೋಟೆಯಲ್ಲಿ ಕೊಲೆಯಾಗಿರುವ ಯುವಕ ಎಸ್. ಹನುಮಂತಪ್ಪ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸಿರುಗುಪ್ಪ ನಗರದಲ್ಲಿ ಶುಕ್ರವಾರ ಭಾರೀ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಕೊಲೆ ಪ್ರಕರಣವನ್ನು ಖಂಡಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಯುವ ಮುಖಂಡ ಎಂ.ಎಸ್. ಸಿದ್ದಪ್ಪ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಎಸ್. ಹನುಮಂತಪ್ಪ ಅವರನ್ನು ವಿನಾಕಾರಣ ಕೊಲೆ ಮಾಡಲಾಗಿದೆ. ಸಂತ್ರಸ್ತ ಕುಟುಂಬಕ್ಕೆ ಸರ್ಕಾರ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಸಿರುಗುಪ್ಪ ತಾಲೂಕು ನ್ಯಾಯಾಲಯದ ಆವರಣದಿಂದ ಗಾಂಧಿ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಬಳಿಕ ಪ್ರತಿಭಟನಾಕಾರರು ತಹಸೀಲ್ದಾರ್ ಹಾಗೂ ಉಪ ಪೊಲೀಸ್ ಅಧೀಕ್ಷಕರ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಕೊಲೆ ಪ್ರಕರಣವನ್ನು ಖಂಡಿಸಿದ ಪ್ರತಿಭಟನಾಕಾರರು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸುವುದರ ಜತೆಗೆ ಆರ್ಥಿಕ ನೆರವು ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande