
ಕುರುಗೋಡು, 21 ನವೆಂಬರ್ (ಹಿ.ಸ.)
2023-24ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸುವ ಸೌಲಭ್ಯಕ್ಕಾಗಿ ಕುರುಗೋಡು ಪುರಸಭೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬಿ.ಇ, ಎಂ.ಬಿ.ಬಿ.ಎಸ್, ಎಂ.ಡಿ ಸೇರಿದಂತೆ ಇತರೆ ಪದವಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಈ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಬಹುದು.
*ಅಗತ್ಯ ದಾಖಲೆಗಳು:*
ವಿದ್ಯಾರ್ಥಿಗಳು ಕಡ್ಡಾಯವಾಗಿ ಕುರುಗೋಡು ಪುರಸಭೆ ವ್ಯಾಪ್ತಿಯ ನಿವಾಸಿಯಾಗಿರಬೇಕು. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅಥವಾ ಗುರುತಿನ ಚೀಟಿ ಸಲ್ಲಿಸಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಲಗತ್ತಿಸಬೇಕು. ಪಾಸ್ಪೋರ್ಟ್ ಅಳತೆಯ ಭಾವಚಿತ್ರ, ಹಿಂದಿನ ತರಗತಿಯ ಅಂಕಪಟ್ಟಿ ಹಾಗೂ ಪ್ರಮಾಣ ಪತ್ರಗಳನ್ನು ನೀಡಬೇಕು.
ಅರ್ಜಿ ಸಲ್ಲಿಸಲು ನವೆಂಬರ್ 30 ರ ಸಂಜೆ 4.30 ಗಂಟೆ ಕೊನೆಯ ದಿನವಾಗಿದೆ.
ಹೆಚ್ಚಿನ ವಿವರಗಳಿಗಾಗಿ ಪುರಸಭೆ ಕಚೇರಿಯ ಸೂಚನಾ ಫಲಕವನ್ನು ವೀಕ್ಷಿಸಬಹುದು ಅಥವಾ ಸಂಬಂಧಿಸಿದ ಶಾಖೆಯ ಸಿಬ್ಬಂದಿಯನ್ನು ಸಂಪರ್ಕಿಸಬಹುದು.
ನಿಗದಿತ ಅವಧಿಯ ನಂತರ ಬರುವ ಅರ್ಜಿಗಳನ್ನು ಯಾವುದೇ ಮುನ್ಸೂಚನೆ ನೀಡದೆ ತಿರಸ್ಕರಿಸಲಾಗುವುದು ಎಂದು ಕುರುಗೋಡು ಪುರಸಭೆಯ ಮುಖ್ಯಾಧಿಕಾರಿಗಳು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್