ಪಿಹೆಚ್.ಡಿ. ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನ
ಬಳ್ಳಾರಿ, 21 ನವೆಂಬರ್ (ಹಿ.ಸ.) 2026-27ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ. ಅಧ್ಯಯನ ಪ್ರಾರಂಭಿಸಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಹೊಸ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ (ಫೆಲೋಶಿಪ್) ನೀಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರವರ್ಗ-1, 2(
ಪಿಹೆಚ್.ಡಿ. ಫೆಲೋಶಿಪ್ ಗಾಗಿ ಅರ್ಜಿ ಆಹ್ವಾನ


ಬಳ್ಳಾರಿ, 21 ನವೆಂಬರ್ (ಹಿ.ಸ.)

2026-27ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ. ಅಧ್ಯಯನ ಪ್ರಾರಂಭಿಸಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಹೊಸ ಅಭ್ಯರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ (ಫೆಲೋಶಿಪ್) ನೀಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗೆ ಸೇರಿದ ಅಭ್ಯರ್ಥಿಗಳು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳು 09-01-2026 ಮತ್ತು ಅದರ ನಂತರ ಕರ್ನಾಟಕದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ ಅಥವಾ ಅವುಗಳ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಹೆಚ್.ಡಿ. ಅಧ್ಯಯನವನ್ನು ಪ್ರಾರಂಭಿಸಿರಬೇಕು.

ಆಸಕ್ತ ಮತ್ತು ಅರ್ಹ ಹೊಸ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 17 ರ ಸಂಜೆ 5.30 ಗಂಟೆ ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ bcwd.karnataka.gov.in ಗೆ ಭೇಟಿ ನೀಡಿ, ಎಲ್ಲಾ ನಿಯಮಗಳನ್ನು ಓದಿ ತಿಳಿದುಕೊಂಡು ಅರ್ಜಿ ಸಲ್ಲಿಸಬಹುದು.

ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ 8050770004 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande