
ದಾವಣಗೆರೆ, 21 ನವೆಂಬರ್ (ಹಿ.ಸ.):
ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರು ದಾವಣಗೆರೆ ಜಿಲ್ಲೆಯ ಹರಿಹರದಲ್ಲಿರುವ ಪಂಚಮಸಾಲಿ ಜಗದ್ಗುರು ಪೀಠಕ್ಕೆ ಭೇಟಿ ನೀಡಿ, ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳವರ ದರ್ಶನ ಪಡೆದು ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ತಮ್ಮ ಸುಪುತ್ರಿಯ ವಿವಾಹ ಮಹೋತ್ಸವಕ್ಕೆ ಆಗಮಿಸುವಂತೆ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿಗಳನ್ನು ಆತ್ಮೀಯವಾಗಿ ಆಹ್ವಾನಿಸಿದರು.
ಇದೇ ವೇಳೆ ಜಗದ್ಗುರುಗಳೊಂದಿಗೆ ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಮಾನಗಳು ಹಾಗೂ ಮುಂದಿನ ರಾಜ್ಯ ರಾಜಕಾರಣದ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದರು ಎಂದು ತಿಳಿದುಬಂದಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R