ಬಸವಣ್ಣನವರ ಬಗ್ಗೆ ಅವಹೇಳನಕಾರಿ ಹೇಳಿಕೆ ಸಹಿಸುವುದಿಲ್ಲ: ಸಚಿವ ಈಶ್ವರ ಖಂಡ್ರೆ
ಗದಗ, 21 ನವೆಂಬರ್ (ಹಿ.ಸ.) ವಿಶ್ವಗುರು ಬಸವಣ್ಣನವರು ನಮಗೆ ಆದರ್ಶಪ್ರಾಯರು. ಜಗತ್ತಿಗೆ ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ನೀಡಿದ ಬಸವಾದಿ ಶರಣರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ಯಾರೂ ಸಹಿಸಲು ಸಾಧ್ಯವಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸ
ಫೋಟೋ


ಗದಗ, 21 ನವೆಂಬರ್ (ಹಿ.ಸ.)

ವಿಶ್ವಗುರು ಬಸವಣ್ಣನವರು ನಮಗೆ ಆದರ್ಶಪ್ರಾಯರು. ಜಗತ್ತಿಗೆ ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಪ್ರಜಾಪ್ರಭುತ್ವದ ಪರಿಕಲ್ಪನೆಯನ್ನು ನೀಡಿದ ಬಸವಾದಿ ಶರಣರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ಯಾರೂ ಸಹಿಸಲು ಸಾಧ್ಯವಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.

ಗದಗದಲ್ಲಿ ಮಾತನಾಡಿದ ಅವರು, ಬಸವಣ್ಣನವರು ಸರ್ವ ಸಮಾನತೆಗಾಗಿ ಹೋರಾಟ ಮಾಡಿದ ಮಹಾನ್ ದಾರ್ಶನಿಕರು. ಇಂತಹ ಮಹಾಪುರುಷರ ಬಗ್ಗೆ ರವಿ ಹಂಜ್ ಎಂಬ ಸ್ವಯಂಘೋಷಿತ ಸಂಶೋಧಕರು 'ಬಸವ ಮಂಟಪ' ಕೃತಿಯಲ್ಲಿ ಅವಮಾನಕರ ಹಾಗೂ ಅವಹೇಳನಕಾರಿ ವಿಚಾರಗಳನ್ನು ಪ್ರಸ್ತಾಪಿಸಿರುವುದು ಅತ್ಯಂತ ಖಂಡನೀಯ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.

ಬಸವ ಮಂಟಪ ಕೃತಿ ರಚಿಸಿರುವುದು ಅಕ್ಷಮ್ಯ ಅಪರಾಧ. ಈ ಕೃತಿಯಿಂದ ಬಸವಣ್ಣನವರ ಭಕ್ತರು ಹಾಗೂ ಸಮುದಾಯದ ಜನರ ಭಾವನೆಗಳಿಗೆ ಧಕ್ಕೆಯಾಗಿದೆ. ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸಚಿವ ಸಂಪುಟದಲ್ಲಿ ಒತ್ತಾಯಿಸಲಾಗಿತ್ತು. ಅದರಂತೆ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಪುಸ್ತಕ ಮುಟ್ಟುಗೋಲು ಹಾಕುವ ಕ್ರಮ ಕೈಗೊಂಡಿದ್ದಾರೆ. ಕೃತಿ ರಚಿಸಿದ ರವಿ ಹಂಜ್ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮೂರನೇ ಮುಖ್ಯಮಂತ್ರಿ ವಿಚಾರ ರಾಮುಲು ಹೇಳಿಕೆಗೆ ತಿರುಗೇಟು

ಚಳಿಗಾಲದ ಅಧಿವೇಶನದ ನಂತರ ರಾಜ್ಯಕ್ಕೆ ಮೂರನೇ ಮುಖ್ಯಮಂತ್ರಿ ಬರುತ್ತಾರೆ ಎಂಬ ಮಾಜಿ ಸಚಿವ ಬಿ. ಶ್ರೀರಾಮುಲು ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಈಶ್ವರ ಖಂಡ್ರೆ, ರಾಮುಲು ಅವರಿಗೆ ಬೇರೆ ಕೆಲಸವಿಲ್ಲವೇ? ಇಂತಹ ಹೇಳಿಕೆಗಳನ್ನು ಸೃಷ್ಟಿಸಿ ಮಾತನಾಡುತ್ತಿದ್ದಾರೆ. ಅವರು ಸೋತು ಸುಣ್ಣವಾಗಿದ್ದಾರೆ. ಇಂತಹ ಹೇಳಿಕೆಗಳು ಚರ್ಚೆಯಾಗುವ ಅಗತ್ಯವಿಲ್ಲ. ಮೂರನೇ ಮುಖ್ಯಮಂತ್ರಿ ಬರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಶಾಸಕರ ಸಹಿ ಸಂಗ್ರಹದ ವಿಚಾರವಾಗಿ ಮಾತನಾಡಿದ ಅವರು, ಶಾಸಕರಿಗೆ ಸರ್ಕಾರದಿಂದ ಸಾವಿರಾರು ಕೋಟಿ ರೂಪಾಯಿ ಅನುದಾನ ನೀಡಲಾಗುತ್ತಿದೆ. ಹಾಗಿರುವಾಗ ಶಾಸಕರು ಮತ್ತೆ ಏಕೆ ಸಹಿ ಸಂಗ್ರಹ ಮಾಡುತ್ತಾರೆ? ಯಾವ ಶಾಸಕರು ಸಹಿ ಸಂಗ್ರಹಿಸಿದ್ದಾರೆ ಎಂಬುದನ್ನು ಹೇಳಲಿ ಎಂದು ಪ್ರಶ್ನಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande