ನ. 27ರಂದು ಬಳ್ಳಾರಿಯಲ್ಲಿ ಸಂತ ಕನಕದಾಸರ ಜಯಂತಿ ಆಚರಣೆ
ಬಳ್ಳಾರಿ, 21 ನವೆಂಬರ್ (ಹಿ.ಸ.) ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಸಂತಶ್ರೇಷ್ಠ ಭಕ್ತ ಕನಕದಾಸರ ಜಯಂತಿ ನವೆಂಬರ್ 27 ರಂದು ಮಧ್ಯಾಹ್ನ 12.30 ಗಂಟೆಗೆ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ನಡೆಯ
ಬಳ್ಳಾರಿ: ನ. 27ರಂದು ಸಂತಶ್ರೇಷ್ಠ  ಭಕ್ತ ಕನಕದಾಸರ ಜಯಂತಿ


ಬಳ್ಳಾರಿ: ನ. 27ರಂದು ಸಂತಶ್ರೇಷ್ಠ  ಭಕ್ತ ಕನಕದಾಸರ ಜಯಂತಿ


ಬಳ್ಳಾರಿ, 21 ನವೆಂಬರ್ (ಹಿ.ಸ.)

ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಸಂತಶ್ರೇಷ್ಠ ಭಕ್ತ ಕನಕದಾಸರ ಜಯಂತಿ ನವೆಂಬರ್ 27 ರಂದು ಮಧ್ಯಾಹ್ನ 12.30 ಗಂಟೆಗೆ ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ನಡೆಯಲಿದೆ.

ಮೆರವಣಿಗೆ ಹಾಗೂ ಮಾಲಾರ್ಪಣೆ: ಅಂದು ಬೆಳಿಗ್ಗೆ 9 ಗಂಟೆಗೆ ಬಳ್ಳಾರಿ ನಗರದ ಕನಕ ವೃತ್ತದಲ್ಲಿರುವ ಭಕ್ತ ಕನಕದಾಸರ ಪುತ್ಥಳಿಗೆ ಮಾಲಾರ್ಪಣೆ ನಡೆಯಲಿದೆ. ನಂತರ ಕನಕದಾಸರ ವೃತ್ತದಿಂದ ವಾಲ್ಮೀಕಿ ವೃತ್ತ, ಕನಕದುರ್ಗಮ್ಮ ದೇವಸ್ಥಾನ, ಗಡಿಗಿ ಚನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೇ ಬ್ರೂಸ್ ಪೇಟೆ ಪೆÇಲೀಸ್ ಠಾಣೆ, ತೇರು ಬೀದಿ ಹಾಗೂ ಹೆಚ್.ಆರ್. ಗವಿಯಪ್ಪ ವೃತ್ತದ ಮೂಲಕ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದವರೆಗೆ ಮೆರವಣಿಗೆ ಸಾಗಲಿದೆ.

ವೇದಿಕೆ ಕಾರ್ಯಕ್ರಮದ ಉದ್ಘಾಟನೆ ಮತ್ತು ಅಧ್ಯಕ್ಷತೆಯನ್ನು ಬಳ್ಳಾರಿ ನಗರ ಶಾಸಕ ನಾರಾ ಭರತರೆಡ್ಡಿ ವಹಿಸಲಿದ್ದಾರೆ.

ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಡಾ. ಕೆ. ಬಸಪ್ಪ ಉಪನ್ಯಾಸ ನೀಡಲಿದ್ದು, ಬಳ್ಳಾರಿಯ ಕೆ. ವಸಂತಕುಮಾರ್ ಕನಕದಾಸರ ಕೀರ್ತನೆಗಳನ್ನು ಪ್ರಸ್ತುತಪಡಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಬಳ್ಳಾರಿ ಲೋಕಸಭಾ ಸಂಸದ ಈ. ತುಕಾರಾಮ್, ಕೊಪ್ಪಳ ಲೋಕಸಭಾ ಸಂಸದ ಕೆ. ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭಾ ಸದಸ್ಯ ಡಾ. ಸೈಯದ್ ನಾಸೀರ್ ಹುಸೇನ್, ಕಂಪ್ಲಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತ (ಕಾವೇರಿ ಹ್ಯಾಂಡ್ಲೂಮ್ಸ್) ಅಧ್ಯಕ್ಷರಾದ ಜೆ.ಎನ್. ಗಣೇಶ್, ಡಾ. ಬಾಬು ಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ. ನಾಗರಾಜ, ಸಂಡೂರು ಶಾಸಕರಾದ ಈ. ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ಡಾ. ಚಂದ್ರಶೇಖರ ಬಿ. ಪಾಟೀಲ, ಶಶಿಲ್ ಜಿ. ನಮೋಶಿ, ವೈ.ಎಂ. ಸತೀಶ್, ಬಳ್ಳಾರಿ ಮಹಾನಗರ ಪಾಲಿಕೆ ಮಹಾಪೌರರಾದ ಪಿ. ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್. ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾಪೆರ್Çರೇಷನ್ ಲಿಮಿಟೆಡ್ (ಬೆಂಗಳೂರು) ಉಪಾಧ್ಯಕ್ಷ ಹೆಚ್. ಲಕ್ಷ್ಮಣ ಮತ್ತು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ .ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರಿಸ್ ಸುಮೇರ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ .ಡಿ.ಪಿ., ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ .ಎನ್, ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ .ಪಿ.ಎಸ್ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ ಅವರು ಉಪಸ್ಥಿತರಿರಲಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande