
ಧಾರವಾಡ, 21 ನವೆಂಬರ್ (ಹಿ.ಸ.):
ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ನೇತೃತ್ವದಲ್ಲಿ ಮಾಡೆಲ್ ಹೈಸ್ಕೂಲ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಜಾಸೇವೆ ಆಂದೋಲನ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಕಾರ್ಯಕ್ರಮದಲ್ಲಿ ನೂರಾರು ಸಾರ್ವಜನಿಕರು ಭಾಗವಹಿಸಿ ತಮ್ಮ ವಿವಿಧ ಅಹವಾಲುಗಳನ್ನು ಸಲ್ಲಿಸಿದರು. ಸಾರ್ವಜನಿಕರಿಂದ ಸ್ವೀಕೃತವಾದ ಅಹವಾಲುಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಈ ಆಂದೋಲನವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು.
ಕಾರ್ಯಕ್ರಮದಲ್ಲಿ ಕ್ಷೇತ್ರದ ಶಾಸಕರಾದ ಎನ್.ಹೆಚ್. ಕೋನರಡ್ಡಿ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.