
ಬಳ್ಳಾರಿ, 21 ನವೆಂಬರ್ (ಹಿ.ಸ.)
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘ-ಸ0ಸ್ಥೆಗಳ ಸಹಯೋಗದಲ್ಲಿ 2026-27ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ನವೆಂಬರ್ 26ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಿಡಿಎಎ ಫುಟ್ಬಾಲ್ ಮೈದಾನದ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
15ರಿಂದ 29 ವರ್ಷದೊಳಗಿನ ಯುವಕ-ಯುವತಿಯರಿಗೆ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶವಿದ್ದು, ಜಿಲ್ಲೆಯ ಎಲ್ಲಾ ಯುವಕ-ಯುವತಿಯರು, ಸಂಘ-ಸAಸ್ಥೆಗಳ ಪ್ರತಿನಿಧಿಗಳು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಸ್ಪರ್ಧಿಗಳು ರಾಜ್ಯ ಮಟ್ಟದ ಯುವಜನೋತ್ಸವಕ್ಕೆ ಆಯ್ಕೆಯಾಗುತ್ತಾರೆ.
*ಸ್ಪರ್ಧೆಗಳ ವಿವರ:*
ಜಾನಪದ ನೃತ್ಯ (10 ಜನರ ತಂಡ), ಜಾನಪದ ಗೀತೆ (10 ಜನರ ತಂಡ), ಚಿತ್ರಕಲೆ (ವೈಯಕ್ತಿಕ), ನುಕ್ಕಾಡ್ ನಾಟಕ (‘ನಶಾ ಮುಕ್ತ ಯುವ' ವಿಷಯದ ಮೇಲೆ -10 ಜನರ ತಂಡ), ಕವಿತೆ ಬರೆಯುವುದು (ವೈಯಕ್ತಿಕ).
ನೋಂದಣಿ ವಿಧಾನ: ಆಸಕ್ತ ಸ್ಪರ್ಧಾಳುಗಳು ಆಧಾರ್ ಕಾರ್ಡ್ ಮತ್ತು ಜನನ ಪ್ರಮಾಣ ಪತ್ರದೊಂದಿಗೆ ಬಳ್ಳಾರಿಯ ಜಿಲ್ಲಾ ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ನಿಗದಿತ ಅರ್ಜಿ ನಮೂನೆ ಪಡೆದು ನವೆಂಬರ್ 25ರೊಳಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಇಲ್ಲವೇ ನವೆಂಬರ್ 26ರಂದು ಬೆಳಿಗ್ಗೆ 9ರಿಂದ 10.30ರೊಳಗೆ ಬಿಡಿಎಎ ಫುಡ್ಬಾಲ್ ಮೈದಾನ ಸಭಾಂಗಣದಲ್ಲಿ ನೋಂದಣಿ ಮಾಡಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕ್ರೀಡಾಂಗಣದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಅಥವಾ 8971238689 ಹಾಗೂ 7026401500 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್