
ಗದಗ, 21 ನವೆಂಬರ್ (ಹಿ.ಸ.)
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಭೋವಿ ಸಮುದಾಯದ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರ ರೂಪಿಸಿರುವ ವಿವಿಧ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ರಾಮಪ್ಪ ಅವರು ಸೂಚಿಸಿದರು.
ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿಂದು ಜರುಗಿದ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳ ಅನುಷ್ಠಾನ ಹಾಗೂ ಪ್ರಗತಿ ಪರಿಶೀಲನೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸರ್ಕಾರವು ಸಮುದಾಯದ ಅಭಿವೃದ್ಧಿಗಾಗಿ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಿದ್ದು, ಅವುಗಳ ಪ್ರಯೋಜನ ಅರ್ಹ ಫಲಾನುಭವಿಗಳಿಗೆ ತಲುಪುವುದು ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ನಿಗಮದ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳ ಪ್ರಗತಿಯನ್ನು ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸಬೇಕು. ಯೋಜನೆಗಳ ಕುರಿತು ಸಮುದಾಯದ ಜನರಲ್ಲಿ ಅರಿವು ಮೂಡಿಸಿ, ಅರ್ಹ ಫಲಾನುಭವಿಗಳು ಸೌಲಭ್ಯಗಳಿಂದ ವಂಚಿತರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ನಿಗಮದ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗದಂತೆ ಎಚ್ಚರಿಕೆ ವಹಿಸಬೇಕು. ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಕೊಂಡು, ಸರ್ಕಾರದ ಮಾರ್ಗಸೂಚಿಗಳನ್ವಯ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ನಿಗಮದ ಉದ್ದೇಶಿತ ಗುರಿಗಳನ್ನು ಸಾಧಿಸಲು ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ, ಯೋಜನೆಗಳ ಪ್ರಗತಿ ಕುರಿತು ಕಾಲಕಾಲಕ್ಕೆ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.
ನಿಗಮದ ಮೂಲಕ ಸಮುದಾಯದ ಜನರ ಸ್ವಾವಲಂಬಿ ಬದುಕಿಗೆ ನೆರವಾಗುವ ಉದ್ದೇಶದಿಂದ ವಿವಿಧ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರ ಸಾಲ, ಉದ್ಯಮಶೀಲತಾ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆ ಹಾಗೂ ಇತರೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಗಳ ಕುರಿತು ಸಮುದಾಯದ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ, ಅರ್ಹ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ ಒದಗಿಸಬೇಕು ಎಂದರು.
ನಿಗಮದ ವಿವಿಧ ಯೋಜನೆಗಳಡಿ ಇದುವರೆಗೆ ಸಾಧಿಸಿರುವ ಪ್ರಗತಿ, ಫಲಾನುಭವಿಗಳ ಆಯ್ಕೆ, ಮಂಜೂರಾತಿ, ಆರ್ಥಿಕ ನೆರವು ವಿತರಣೆ ಹಾಗೂ ಬಾಕಿ ಉಳಿದಿರುವ ಅರ್ಜಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲಿಸಿದರು. ಬಾಕಿ ಇರುವ ಪ್ರಕ್ರಿಯೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಯೋಜನೆಗಳ ಪ್ರಯೋಜನ ಸಮಾಜದ ಕಟ್ಟಕಡೆಯ ಅರ್ಹ ವ್ಯಕ್ತಿಗೂ ತಲುಪುವಂತೆ ಕ್ರಮವಹಿಸಬೇಕು ಎಂದು ನಿರ್ದೇಶನ ನೀಡಿದರು.
ಭೋವಿ ಸಮುದಾಯದ ಯುವಜನರು ಸ್ವಯಂ ಉದ್ಯೋಗದ ಮೂಲಕ ಆರ್ಥಿಕವಾಗಿ ಸಬಲರಾಗಲು ಹಾಗೂ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ನಿಗಮದ ಯೋಜನೆಗಳು ಸಹಕಾರಿಯಾಗಬೇಕು. ಈ ನಿಟ್ಟಿನಲ್ಲಿ ಫಲಾನುಭವಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ, ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ರಾಮಪ್ಪ ನಿಗಮದ ಯೋಜನೆಗಳ ಬಗ್ಗೆ ಮಾತನಾಡಿ ಭೋವಿ ಸಮಾಜದ ಜನಗಳಿಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ನಿರುದ್ಯೋಗ ಯುವಕ ಯುವತಿಯರಿಗೆ ಹಣ್ಣು, ತರಕಾರಿ, ಮೀನು, ಮಾಂಸ ಮಾರಾಟ ಹಾಗೂ ಕುರಿ, ಮೇಕೆ, ಹಸು ಮತ್ತು ಇತರೆ ಜಾನುವಾರು ಸಾಕಾಣಿಕೆ ಸೇರಿದಂತೆ ವಿವಿಧ ಕಿರು ಉದ್ಯಮಗಳಿಗೆ 1 ಲಕ್ಷ ಘಟಕ ವೆಚ್ಚದಲ್ಲಿ ನೆರವು ನೀಡಲಾಗುತ್ತಿದೆ. ಇದರಲ್ಲಿ 50 ಸಾವಿರ ಸಹಾಯಧನ ಹಾಗೂ 50 ಸಾವಿರ ಸಾಲವಿದ್ದು, ಸಾಲಕ್ಕೆ ಶೇ.4 ಬಡ್ಡಿ ವಿಧಿಸಲಾಗುತ್ತದೆ. ಸಾಲವನ್ನು 36 ಸಮ ಕಂತುಗಳಲ್ಲಿ ಮರುಪಾವತಿಸಬೇಕು.
ಕುರಿ/ ಮೇಕೆ ಸಾಕಾಣಿಕೆ ಯೋಜನೆ : ಕುರಿ ಮತ್ತು ಮೇಕೆ ಸಾಕಾಣಿಕೆ ಯೋಜನೆಯಡಿ ಕುರಿ/ ಮೇಕೆ ಸಾಕಾಣಿಕೆ ಉದ್ದೇಶಕ್ಕೆ ನಿಗಮದಿಂದ ಸಹಾಯಧನ ಮತ್ತು ಸಾಲ ಮಂಜೂರು ಮಾಡಲಾಗುತ್ತದೆ. 1 ಲಕ್ಷ ಘಟಕ ವೆಚ್ಚದಲ್ಲಿ 50 ಸಾವಿರ ಸಹಾಯಧನ ಹಾಗೂ 50 ಸಾವಿರ ಸಾಲವಾಗಿದ್ದು ನಿಗಮದಿಂದ ಒದಗಿಸಲಾಗುತ್ತದೆ. ಈ ಯೋಜನೆಯಡಿಯಲ್ಲಿ ಪಲಾಪೇಕ್ಷಿಗಳಿಗೆ 10 ಹೆಣ್ಣು ಕುರಿ ಅಥವಾ ಮೇಕೆ ಹಾಗೂ ಒಂದು ಟಗರಿನೊಂದಿಗೆ ಆರ್ಥಿಕ ನೆರವು ಕಲ್ಪಿಸಲಾಗುತ್ತಿದೆ. ಸಾಲದ ಮೊತ್ತಕ್ಕೆ ವಾರ್ಷಿಕ ಶೇಕಡ 4 ರಷ್ಟು ಬಡ್ಡಿ ವಿಧಿಸಲಾಗುತ್ತದೆ. ಪಲಾನುಭವಿಗಳು ಸಾಲದ ಮೊತ್ತವನ್ನು 36 ಸಮಾ ಕಂತುಗಳಲ್ಲಿ ನಿಗಮಕ್ಕೆ ಮರುಪಾವತಿ ಮಾಡಬೇಕಾಗಿರುತ್ತದೆ.
ಉದ್ಯಮ ಶೀಲತಾ ಯೋಜನೆ (ಬ್ಯಾಂಕ್ ಸಹಯೋಗದ): ಉದ್ಯಮಶೀಲತಾ ಯೋಜನೆಯಡಿ ಬಿ ಐ ಬ್ಯಾಂಕ್ ಆಯೋಗದಲ್ಲಿ ಪಸ್ಟ ಜಾತಿ ಭೋವಿ ಸಮುದಾಯದ ನಿರ್ಯೋಗ ಯುವಕ ವೈದ್ಯರಿಗೆ ಆರ್ಥಿಕ ಅಭಿವೃದ್ಧಿ ಹೊಂದುವ ಸಲುವಾಗಿ ಸಣ್ಣ ಕೈಗಾರಿಕೆ ಸೇವಾಗ್ ಕ್ಷೇತ್ರ ಮತ್ತು ವ್ಯಾಪಾರ ಕ್ಷೇತ್ರಗಳಲ್ಲಿ ಸ್ವಯಂ ಉದ್ಯೋಗ ಘಟಕಗಳನ್ನು ಆರಂಭಿಸಲು ಮತ್ತು ಸರಕು ಸಾಗಾಣಿಕೆ ಪ್ರವಾಸಿ ವಾಹನ ಹಳದಿ ಬೋರ್ಡ್ ಖರೀದಿಸಲು, ಪಾಸ್ ಫುಡ್ ಟ್ರಕ್ ಟ್ರೇಲರ್ ಮೊಬೈಲ್ ಕಿಚನ್ ಫುಡ್ ಕಿಯೋಸ್ಟ್, ಹೈನುಗಾರಿಕೆ ಸೇರಿದಂತೆ ವಿವಿಧ ಉದ್ಯಮಗಳಿಗೆ ಸಹಾಯಧನ ನೀಡಲಾಗುತ್ತದೆ.
ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ : ಮೈಕ್ರೋ ಕ್ರೆಡಿಟ್ ಪ್ರೇರಣಾ ಯೋಜನೆಯಡಿ ಕನಿಷ್ಠ 10 ಮಹಿಳಾ ಸದಸ್ಯರಿರುವ ಸ್ವಸಹಾಯ ಸಂಘಗಳಿಗೆ 5 ಲಕ್ಷ ಆರ್ಥಿಕ ನೆರವು ನೀಡಲಾಗುತ್ತದೆ. ಇದರಲ್ಲಿ 2.50 ಲಕ್ಷ ಸಹಾಯಧನ ಹಾಗೂ 2.50 ಲಕ್ಷ ಸಾಲ ಸೌಲಭ್ಯವಿದೆ. ಪ್ರತಿ ಸದಸ್ಯರಿಗೆ 25 ಸಾವಿರ ಸಹಾಯಧನ ಮತ್ತು 25 ಸಾವಿರ ಸಾಲ ನೀಡಲಾಗುತ್ತದೆ.
ಭೂ ಒಡೆತನ ಯೋಜನೆ : ಭೂ ಒಡೆತನ ಯೋಜನೆಯು ನಿಗಮದ ಪ್ರತಿಷ್ಠಿತ ಯೋಜನೆಯಾಗಿದ್ದು, ಈ ಯೋಜನೆಯಡಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದ ಭೂ ಮಾಲೀಕರಿಂದ ಜಮೀನನ್ನು ಖರೀದಿಸಿ ಪರಿಶಿಷ್ಟ ಜಾತಿ ಭೋವಿ ಸಮುದಾಯದ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಜಮೀನು ಖರೀದಿಸಿ ನೀಡುವ ಫಲಾನುಭವಿ ವಾಸಿಸುತ್ತಿರುವ ಸ್ಥಳದಿಂದ ಗರಿಷ್ಠ 10 ಕಿಲೋಮೀಟರ್ ವ್ಯಾಪ್ತಿಯೊಳಗೆ ಖುಷ್ಕಿ /ತರಿ /ಭಾಗಾಯ್ತು ಜಮೀನನ್ನು ಕರೆದಿಸಿ ಭೋವಿ ಸಮುದಾಯದ ಬೋರಾಯಿತ ಮಹಿಳಾ ಕೃಷಿ ಕಾರ್ಮಿಕ ಭೂಮಾಲೀಕರನ್ನಾಗಿ ಮಾಡಲಾಗುವುದು. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಘಟಕ ವೆಚ್ಚ ರೂ 25 ಲಕ್ಷಗಳಿದ್ದು. ಉಳಿದ ಜಿಲ್ಲೆಗಳಿಗೆ ಘಟಕ ವೆಚ್ಚ 20 ಲಕ್ಷ ಗಳಾಗಿರುತ್ತವೆ. ಇದರಲ್ಲಿ ಸಹಾಯಧನ ಶೇಕಡ 50 ರಷ್ಟು ಮತ್ತು ಶೇಕಡ 50 ರಷ್ಟು ಸಾಲವನ್ನು ನಿಗಮದಿಂದ ನೀಡಲಾಗುತ್ತದೆ. ಆನಂದ ಮತ್ತು ವಾರ್ಷಿಕ ಸಮಕಂತು ಶೇ 4 ರಷ್ಟು ಬಡ್ಡಿದರದಲ್ಲಿ ನಿಗಮಕ್ಕೆ ಮರುಪಾವತಿ ಮಾಡಬೇಕಿರುತ್ತದೆ.
ಗಂಗಾ ಕಲ್ಯಾಣ ಯೋಜನೆ ವೈಯಕ್ತಿಕ ಕೊಳವೆ ಬಾವಿ/ ಏತ ನೀರಾವರಿ : ಗಂಗಾ ಕಲ್ಯಾಣ ಯೋಜನೆಯಡಿ ಪರಿಶಿಷ್ಟ ಜಾತಿ ಭೋವಿ ಸಮುದಾಯದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕನಿಷ್ಠ 1.20 ಎಕರೆಯಿಂದ ಗರಿಷ್ಠ 5.00 ಎಕರೆ ಕೃಷಿ ಜಮೀನುಗಳಲ್ಲಿ ಕೊಳವೆಬಾವಿ ಕೊರೆಯಿಸಿ ಪಂಪ್ಸೆಟ್ ಅಳವಡಿಸಿ ಹಾಗೂ ವಿದ್ಯುದ್ದೀಕರಣದ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ರಾಮಪ್ಪ ತಿಳಿಸಿದರು.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಶಿವಸ್ವಾಮಿ ಅವರು ಮಾತನಾಡಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಸಮುದಾಯದ ಅಭಿವೃದ್ಧಿಗಾಗಿ ಜಾರಿಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ನಿಗಮದ ಯೋಜನೆಗಳ ಪ್ರಗತಿ, ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಹಾಗೂ ಯೋಜನೆಗಳ ಅನುಷ್ಠಾನದ ಕುರಿತು ಅಧಿಕಾರಿಗಳು ಅಗತ್ಯ ಗಮನಹರಿಸಬೇಕು. ಸರ್ಕಾರದ ಮಾರ್ಗಸೂಚಿಯಂತೆ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ, ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಬೇಕು ಎಂದು ಹೇಳಿದರು.
ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಯೋಜನೆಗಳ ಪ್ರಗತಿಯನ್ನು ಕಾಲಕಾಲಕ್ಕೆ ಪರಿಶೀಲಿಸಿ, ಅನುಷ್ಠಾನದಲ್ಲಿನ ಸಮಸ್ಯೆಗಳನ್ನು ಪರಿಹರಿಸುವ ಮೂಲಕ ನಿಗದಿತ ಗುರಿ ಸಾಧನೆಗೆ ಶ್ರಮಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ನಿಗಮದ ವಿವಿಧ ಯೋಜನೆಗಳ ಅನುಷ್ಠಾನದ ಸ್ಥಿತಿಗತಿ, ಪ್ರಗತಿ ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಚರ್ಚಿಸಲಾಯಿತು.
ಈ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ. ಆರ್, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಶ್ರೀಮತಿ ಸುಮಾ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸಿದ್ದಲಿಂಗ ಸೇರಿದಂತೆ ತಾಲೂಕು ವ್ಯವಸ್ಥಾಪಕರು, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಸಮಾಜದ ಮುಖಂಡರು ಹಾಜರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / lalita MP