ಬಸವಣ್ಣ, ಲಿಂಗಾಯತರ ಬಗ್ಗೆ ಅವಹೇಳನ: ಲೇಖಕ ರವಿ ಹಂಜ್ ಪೊಲೀಸ್ ವಶಕ್ಕೆ
ಸಾಂಸ್ಕೃತಿಕ ನಾಯಕ ಬಸವಣ್ಣ ಹಾಗೂ ಲಿಂಗಾಯತ ಸಮುದಾಯದ ಬಗ್ಗೆ ಅವಹೇಳನಕಾರಿ ಬರಹ ಆರೋಪದಡಿ ‘ಬಸವ ಮಂಟಪ’ ಕೃತಿಯ ಲೇಖಕ ರವಿ ಹಂಜ್ ಅವರನ್ನು ಲುಕ್ಔಟ್ ನೋಟಿಸ್ ಆಧಾರದ ಮೇಲೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ravi-hanj-detained-kochi


ಬೆಂಗಳೂರು, 21 ನವೆಂಬರ್ (ಹಿ.ಸ.):

ಸಾಂಸ್ಕೃತಿಕ ನಾಯಕ ಬಸವಣ್ಣ ಹಾಗೂ ವೀರಶೈವ ಲಿಂಗಾಯತ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಪುಸ್ತಕ ಬರೆದ ಲೇಖಕ ರವಿ ಹಂಜ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರವಿ ಹಂಜ್ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಲಾಗಿತ್ತು. ಇದರ ಆಧಾರದ ಮೇಲೆ ಅವರನ್ನು ಕೊಚ್ಚಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಬೆಳಗಾವಿ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ತಿಳಿಸಿದ್ದಾರೆ.

ಬಸವಣ್ಣ ಅವರಿಗೆ ಅವಮಾನ ಮಾಡಿದ ಆರೋಪದ ಮೇಲೆ ಬೆಂಗಳೂರು ಮತ್ತು ಬೆಳಗಾವಿಯಲ್ಲಿ ರವಿ ಹಂಜ್ ವಿರುದ್ಧ ಪ್ರಕರಣ ದಾಖಲಾಗಿದ್ದವು.

ರವಿ ದುಬೈಗೆ ತೆರಳುತ್ತಿದ್ದ ವೇಳೆ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ವಿಶ್ವವಾಣಿ ಪತ್ರಿಕೆ ಸಂಪಾದಕ ವಿಶ್ವೇಶ್ವರ ಭಟ್ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಬಸವ ಮಂಟಪ’ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಸೇರಿದಂತೆ ರವಿ ಮತ್ತು ವಿಶ್ವೇಶ್ವರ ಭಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸಚಿವ ಸಂಪುಟವು ಗುರುವಾರ ಅನುಮೋದನೆ ನೀಡಿದ ಬಳಿಕ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ರವಿ ಹಂಜ್ ಅವರ ‘ಬಸವ ಮಂಟಪ’ ಕೃತಿ ಕುರಿತು ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande