ಶಾಸಕರಿಂದ 1.12 ಕೋಟಿ ವೆಚ್ಚದ ಚರಂಡಿ, ಸಿಸಿ ರಸ್ತೆ ಕಾಮಗಾರಿ ಪರಿಶೀಲನೆ
ವಿಜಯಪುರ, 22 ನವೆಂಬರ್ (ಹಿ.ಸ.) ಸಿಂದಗಿ ನಗರದ ವಾರ್ಡ್ ನಂ. 14ರಲ್ಲಿ ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ₹1.12 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಚರಂಡಿ ಹಾಗೂ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಮನಗೂಳಿ ಭೇಟಿ ನೀಡಿ ಪ
ಚರಂಡಿ ಕಾಮಗಾರಿ


ವಿಜಯಪುರ, 22 ನವೆಂಬರ್ (ಹಿ.ಸ.)

ಸಿಂದಗಿ ನಗರದ ವಾರ್ಡ್ ನಂ. 14ರಲ್ಲಿ ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ₹1.12 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಚರಂಡಿ ಹಾಗೂ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಮನಗೂಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕಾಮಗಾರಿಯ ಪ್ರಗತಿ, ನಿರ್ಮಾಣದ ಗುಣಮಟ್ಟ ಹಾಗೂ ಕೈಗೊಳ್ಳಲಾಗಿರುವ ವಿವಿಧ ಕಾಮಗಾರಿಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಕಾಮಗಾರಿಯನ್ನು ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ವಾರ್ಡ್ಗಳಲ್ಲಿ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಸುಧಾರಿಸುವುದು ಸಾರ್ವಜನಿಕರ ದೈನಂದಿನ ಬದುಕಿಗೆ ಅತ್ಯಂತ ಅವಶ್ಯಕವಾಗಿದೆ. ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿದುಹೋಗಲು ಸೂಕ್ತ ಚರಂಡಿ ವ್ಯವಸ್ಥೆ ನಿರ್ಮಿಸುವುದರ ಜೊತೆಗೆ ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಸಿಸಿ ರಸ್ತೆ ನಿರ್ಮಾಣಕ್ಕೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಅಭಿವೃದ್ಧಿ ಕಾಮಗಾರಿಗಳು ಕೇವಲ ಯೋಜನೆಗಳಿಗೆ ಸೀಮಿತವಾಗದೆ, ಸಾರ್ವಜನಿಕರಿಗೆ ನೇರವಾಗಿ ಪ್ರಯೋಜನವಾಗುವ ರೀತಿಯಲ್ಲಿ ಅನುಷ್ಠಾನಗೊಳ್ಳಬೇಕು. ಈ ಹಿನ್ನೆಲೆಯಲ್ಲಿ ಕಾಮಗಾರಿಗಳ ಮೇಲೆ ನಿರಂತರ ನಿಗಾ ವಹಿಸಲಾಗುತ್ತಿದ್ದು, ನಿಗದಿತ ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಅಶೋಕ್ ಮನಗೂಳಿ ತಿಳಿಸಿದರು.

ವಾರ್ಡ್ನ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ಜನರ ಅಗತ್ಯತೆಗಳಿಗೆ ಅನುಗುಣವಾಗಿ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande