
ನವದೆಹಲಿ, 22 ನವೆಂಬರ್ (ಹಿ.ಸ.):
ಗುಜರಾತ್‌ನ ಕಚ್ ಮತ್ತು ರಾಜಸ್ಥಾನದ ಕೋಟಾದಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಪಘಾತಗಳಲ್ಲಿ ಮೃತಪಟ್ಟ ಪ್ರತಿಯೊಬ್ಬರ ಕುಟುಂಬಕ್ಕೆ ಪ್ರಧಾನಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಆರ್ಥಿಕ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂತಾಪ ಸೂಚಿಸಿರುವ ಪ್ರಧಾನಿ ಮೋದಿ, ಕಚ್ ಮತ್ತು ಕೋಟಾದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಜೀವಹಾನಿಯಾಗಿರುವ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ಈ ಸಂಕಷ್ಟದ ಸಂದರ್ಭದಲ್ಲಿ ಮೃತರ ಕುಟುಂಬಗಳೊಂದಿಗೆ ತಮ್ಮ ಸಂವೇದನೆಗಳು ಇರಲಿವೆ. ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುವುದಾಗಿ ತಿಳಿಸಿದ್ದಾರೆ.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.