ರಾಜಸ್ಥಾನ ರಸ್ತೆ ಅಪಘಾತ: ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ
ನವದೆಹಲಿ, 22 ನವೆಂಬರ್ (ಹಿ.ಸ.): ರಾಜಸ್ಥಾನದ ಕೋಟಾ-ಉದಯಪುರ ರಾಷ್ಟ್ರೀಯ ಹೆದ್ದಾರಿಯ ಶಂಭೂಪುರ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂಬತ್ತು ಮಂದಿ ಮೃತಪಟ್ಟಿರುವ ಘಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ
राष्ट्रपति द्रौपदी मुर्मु (फाइल फोटो)


ನವದೆಹಲಿ, 22 ನವೆಂಬರ್ (ಹಿ.ಸ.):

ರಾಜಸ್ಥಾನದ ಕೋಟಾ-ಉದಯಪುರ ರಾಷ್ಟ್ರೀಯ ಹೆದ್ದಾರಿಯ ಶಂಭೂಪುರ ಗ್ರಾಮದ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂಬತ್ತು ಮಂದಿ ಮೃತಪಟ್ಟಿರುವ ಘಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಂದೇಶ ಪ್ರಕಟಿಸಿರುವ ರಾಷ್ಟ್ರಪತಿಗಳು, ಕೋಟಾದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹಲವರು ಮೃತಪಟ್ಟಿರುವ ಸುದ್ದಿ ಅತ್ಯಂತ ದುಃಖಕರವಾಗಿದೆ. ಮೃತರ ಕುಟುಂಬ ಸದಸ್ಯರಿಗೆ ಆಳವಾದ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

ಶನಿವಾರ ಮಧ್ಯರಾತ್ರಿ ಸುಮಾರು ಒಂದು ಗಂಟೆಗೆ ಈ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರದ ಒಂದೇ ಕುಟುಂಬದ ಒಂಬತ್ತು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಪೊಲೀಸರ ಮಾಹಿತಿ ಪ್ರಕಾರ, ಮಹಾರಾಷ್ಟ್ರದ ಧುಲೆ ಜಿಲ್ಲೆಯ ಒಂದೇ ಕುಟುಂಬದ 16 ಮಂದಿ ಕ್ರೂಸರ್ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಧಾರ್ಮಿಕ ಕ್ಷೇತ್ರಗಳ ದರ್ಶನಕ್ಕಾಗಿ ಮಂಗಳವಾರ ಮಹಾರಾಷ್ಟ್ರದಿಂದ ಪ್ರಯಾಣ ಆರಂಭಿಸಿದ್ದ ಕುಟುಂಬ, ಮಧ್ಯಪ್ರದೇಶದ ಓಂಕಾರೇಶ್ವರ ಹಾಗೂ ರಾಜಸ್ಥಾನದ ಪುಷ್ಕರ್ ಮತ್ತು ಖಾಟೂ ಶ್ಯಾಮ್‌ಜಿ ದೇವಾಲಯಗಳಿಗೆ ಭೇಟಿ ನೀಡಿತ್ತು.

ಶನಿವಾರ ರಾತ್ರಿ ಎಲ್ಲರೂ ತಮ್ಮ ಮನೆಗಳಿಗೆ ವಾಪಸಾಗುತ್ತಿದ್ದ ಸಂದರ್ಭದಲ್ಲಿ ಶಂಭೂಪುರ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕುಟುಂಬದ ಒಂಬತ್ತು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande