
ಬೆಂಗಳೂರು, 22 ನವೆಂಬರ್ (ಹಿ.ಸ.):
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಗೆ ಸ್ಪಂದಿಸುವಂತೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.
ಆಶಾ ಕಾರ್ಯಕರ್ತೆಯರು ಮಾಸಿಕ ಗೌರವಧನ ಹೆಚ್ಚಳಕ್ಕಾಗಿ ಹಲವು ದಿನಗಳಿಂದ ಚಳಿಯನ್ನೂ ಲೆಕ್ಕಿಸದೆ ಬಯಲಿನಲ್ಲಿ ಹಗಲು-ರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮಹಿಳೆಯರ ಈ ಪರಿಸ್ಥಿತಿ ಕಳವಳಕಾರಿಯಾಗಿದ್ದು, ಮುಖ್ಯಮಂತ್ರಿ ಅವರು ವೈಯಕ್ತಿಕವಾಗಿ ಮಧ್ಯಪ್ರವೇಶಿಸಿ ಸಮಸ್ಯೆ ಪರಿಹರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸುಮಲತಾ ಅಂಬರೀಶ್, ಆಶಾ ಕಾರ್ಯಕರ್ತೆಯರ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸಿ, ಅವರ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಗೆ ಹೆಚ್ಚಿಸುವ ಬೇಡಿಕೆಯನ್ನು ಮಾನವೀಯತೆ ಮತ್ತು ಸಹಾನುಭೂತಿಯ ದೃಷ್ಟಿಯಿಂದ ಪರಿಗಣಿಸಬೇಕು ಎಂದು ಕೋರಿದ್ದಾರೆ.
ಮುಖ್ಯಮಂತ್ರಿಗಳ ಸಮಯೋಚಿತ ಮಧ್ಯಪ್ರವೇಶದಿಂದ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಸಕಾರಾತ್ಮಕ ಪರಿಹಾರ ದೊರೆಯಬೇಕು. ಅವರು ಗೌರವಯುತವಾಗಿ ತಮ್ಮ ಮನೆಗಳಿಗೆ ಮರಳುವಂತಾಗಬೇಕು ಎಂದು ಆಶಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.