ಬೆಂಗಳೂರು: ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸ್ ದಾಳಿ, ಪರಿಶೀಲನೆ
ಅಪರಾಧ ಚಟುವಟಿಕೆಗಳಲ್ಲಿ ತೊಡಗಿದರೆ ಮುಲಾಜಿಲ್ಲದೆ ಕ್ರಮ: ಪೊಲೀಸರ ಎಚ್ಚರಿಕೆ
Bengaluru-Police-Raid-Rowdy-Sheeters-Houses-Crime-Prevention


ಬೆಂಗಳೂರು, 22 ನವೆಂಬರ್ (ಹಿ.ಸ.):

ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಇಂದು ಬೆಳಗ್ಗೆ ನಗರದಾದ್ಯಂತ ರೌಡಿಶೀಟರ್ಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ಕೈಗೊಂಡಿದ್ದಾರೆ.

ಆಯಾ ವಲಯದ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ರೌಡಿಶೀಟರ್ಗಳ ಮನೆಗಳಿಗೆ ಭೇಟಿ ನೀಡಿದ ಪೊಲೀಸರು, ಅವರ ಪ್ರಸ್ತುತ ಉದ್ಯೋಗ, ಜೀವನಶೈಲಿ, ಹಿನ್ನೆಲೆ ಹಾಗೂ ಪ್ರಸ್ತುತ ಚಟುವಟಿಕೆಗಳ ಕುರಿತು ಮಾಹಿತಿ ಸಂಗ್ರಹಿಸಿದ್ದಾರೆ.

ಯಾವುದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರೌಡಿಶೀಟರ್ಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗಷ್ಟೇ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ನಗರದಲ್ಲಿ ಯಾವುದೇ ಕಾರಣಕ್ಕೂ ಸಮಾಜಘಾತುಕ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ನೂತನ ಪೊಲೀಸ್ ಆಯುಕ್ತ ಹಿತೇಂದ್ರ ಅವರ ಸೂಚನೆಯಂತೆ ನಗರದಾದ್ಯಂತ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ರೌಡಿಶೀಟರ್ಗಳ ಚಟುವಟಿಕೆಗಳ ಮೇಲೆ ನಿಗಾ ಇಡುವುದು, ಅಪರಾಧ ಕೃತ್ಯಗಳಲ್ಲಿ ತೊಡಗುವ ಸಾಧ್ಯತೆಗಳನ್ನು ತಡೆಯುವುದು ಹಾಗೂ ಸಾರ್ವಜನಿಕರಲ್ಲಿ ಸುರಕ್ಷತೆಯ ಭಾವನೆ ಮೂಡಿಸುವುದು ಈ ಕಾರ್ಯಾಚರಣೆಯ ಪ್ರಮುಖ ಉದ್ದೇಶವಾಗಿದೆ.

ರೌಡಿಶೀಟರ್ಗಳು ತಮ್ಮ ಹಿಂದಿನ ಅಪರಾಧ ಚಟುವಟಿಕೆಗಳಿಂದ ದೂರವಿದ್ದು, ಕಾನೂನುಬದ್ಧವಾಗಿ ಜೀವನ ನಡೆಸಬೇಕು.

ಮತ್ತೆ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ ಕಾನೂನಿನ ಪ್ರಕಾರ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande