ನಾಳೆಯಿಂದ ಧಾರವಾಡ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ
ಧಾರವಾಡ, 22 ನವೆಂಬರ್ (ಹಿ.ಸ.): ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ನವೆಂಬರ್ 23ರಿಂದ 25ರವರೆಗೆ ಮೂರು ದಿನಗಳ ಕಾಲ ಪೊಲೀಸ್ ಕೇಂದ್ರ ಸ್ಥಾನದ ಡಿಎಆರ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದೆ. ನವೆಂಬರ್ 23ರಂದು ಬೆಳಿಗ್ಗೆ 8.30ಕ್ಕೆ ನಡೆಯುವ ಕ್ರೀಡಾಕೂಟದ ಉದ
ನಾಳೆಯಿಂದ ಧಾರವಾಡ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ


ಧಾರವಾಡ, 22 ನವೆಂಬರ್ (ಹಿ.ಸ.):

ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಪೊಲೀಸ್ ವಾರ್ಷಿಕ ಕ್ರೀಡಾಕೂಟವನ್ನು ನವೆಂಬರ್ 23ರಿಂದ 25ರವರೆಗೆ ಮೂರು ದಿನಗಳ ಕಾಲ ಪೊಲೀಸ್ ಕೇಂದ್ರ ಸ್ಥಾನದ ಡಿಎಆರ್ ಕವಾಯತು ಮೈದಾನದಲ್ಲಿ ಆಯೋಜಿಸಲಾಗಿದೆ.

ನವೆಂಬರ್ 23ರಂದು ಬೆಳಿಗ್ಗೆ 8.30ಕ್ಕೆ ನಡೆಯುವ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಧಾರವಾಡ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಅವರು ಭಾಗವಹಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.

ನವೆಂಬರ್ 25ರಂದು ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭದಲ್ಲಿ ಬೆಳಗಾವಿ ವಲಯದ ಆರಕ್ಷಕ ಮಹಾನಿರೀಕ್ಷಕ ಸಂದೀಪ ಪಾಟೀಲ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande