ನ.25ರಂದು ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ
ಶಿವಮೊಗ್ಗ, 22 ನವೆಂಬರ್ (ಹಿ.ಸ.): 2026–27ನೇ ಸಾಲಿನ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯನ್ನು ನವೆಂಬರ್ 25ರಂದು ಮಧ್ಯಾಹ್ನ 1.30ಕ್ಕೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ಆವರಣದಲ್ಲಿರುವ ಶ್ರೀ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕರ್ನಾಟಕ ಸರ್ಕಾರದ ಸಂಸದೀಯ ವ್ಯವಹಾರಗಳು ಮತ್ತು ಶಾಸನ
ನ.25ರಂದು ಶಿವಮೊಗ್ಗದಲ್ಲಿ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ


ಶಿವಮೊಗ್ಗ, 22 ನವೆಂಬರ್ (ಹಿ.ಸ.):

2026–27ನೇ ಸಾಲಿನ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯನ್ನು ನವೆಂಬರ್ 25ರಂದು ಮಧ್ಯಾಹ್ನ 1.30ಕ್ಕೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ಆವರಣದಲ್ಲಿರುವ ಶ್ರೀ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಕರ್ನಾಟಕ ಸರ್ಕಾರದ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಕಚೇರಿ ಸಂಯುಕ್ತ ಆಶ್ರಯದಲ್ಲಿ ಸ್ಪರ್ಧೆ ನಡೆಯಲಿದೆ.

ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗಾಗಿ ಈ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ), ಶಿವಮೊಗ್ಗ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande