
ಶಿವಮೊಗ್ಗ, 22 ನವೆಂಬರ್ (ಹಿ.ಸ.):
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನವೆಂಬರ್ 26ರಂದು ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ.
ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪಡೆದ 18ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಸಂದರ್ಶನವು ಶಿವಮೊಗ್ಗದ ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಜೀವನವಿವರ (ಬಯೋಡೇಟಾ) ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಪ್ರವೇಶ ಶುಲ್ಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ನೇರವಾಗಿ ಸಂಪರ್ಕಿಸಬಹುದು ಅಥವಾ 9380663606 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.