
ಶಿವಮೊಗ್ಗ, 22 ನವೆಂಬರ್ (ಹಿ.ಸ.):
ರಾಷ್ಟ್ರೀಯ ದತ್ತು ಮಾಸಾಚರಣೆ–2026ರ ಅಂಗವಾಗಿ ನವೆಂಬರ್ 23ರಂದು ಶಿವಮೊಗ್ಗದ ಡಿ.ಎ.ಆರ್. ಸಭಾಂಗಣದಲ್ಲಿ ಒಂದು ದಿನದ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತ ಆಶ್ರಯದಲ್ಲಿ ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.
ಅರೆಕಾಲಿಕ ಸ್ವಯಂಸೇವಕರಾಗಿ ಆಯ್ಕೆಯಾಗಿರುವ ಪೋಕ್ಸೊ ಬೆಂಬಲ ವ್ಯಕ್ತಿಗಳು ಹಾಗೂ ಸ್ವಯಂಸೇವಾ ಸಂಘಗಳ ಪ್ರತಿನಿಧಿಗಳಿಗೆ ತರಬೇತಿ ನೀಡಲಾಗುತ್ತದೆ.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್. ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಭಾರತಿ ಆರ್. ಬಣಕಾರ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ತಾಜುದ್ದೀನ್ ಖಾನ್, ಬಾಲನ್ಯಾಯ ಮಂಡಳಿ ಸದಸ್ಯೆ ರೇಖಾ ಜಿ.ಎಂ. ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶಶಿರೇಖಾ ಉಪಸ್ಥಿತರಿರಲಿದ್ದಾರೆ.
ಶಿವಮೊಗ್ಗ ಆರ್ಟ್ ಆಫ್ ಲಿವಿಂಗ್ನ ಪ್ರಕಾಶ್ ಅವರು ಮಾನಸಿಕ ಒತ್ತಡಗಳ ನಿವಾರಣೆ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.