ಕೆಎಎಸ್ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಪ್ರಕಟ: ಆಕ್ಷೇಪಣೆ ಸಲ್ಲಿಸಲು ನಾಳೆ ಕೊನೆಯ ದಿನ
ಬೆಂಗಳೂರು, 22 ನವೆಂಬರ್ (ಹಿ.ಸ.): ಕರ್ನಾಟಕ ಲೋಕಸೇವಾ ಆಯೋಗವು 319 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗಾಗಿ ನವೆಂಬರ್ 15ರಂದು ನಡೆಸಿದ್ದ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಆಯೋಗದ ಅಧಿಕೃತ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಕೆಎಎಸ್
kas-prelims-result-2026


ಬೆಂಗಳೂರು, 22 ನವೆಂಬರ್ (ಹಿ.ಸ.):

ಕರ್ನಾಟಕ ಲೋಕಸೇವಾ ಆಯೋಗವು 319 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗಾಗಿ ನವೆಂಬರ್ 15ರಂದು ನಡೆಸಿದ್ದ ಪೂರ್ವಭಾವಿ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಆಯೋಗದ ಅಧಿಕೃತ ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ ಉತ್ತರಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ನವೆಂಬರ್ 16ರಂದು ಆಯೋಗದ ಜಾಲತಾಣದಲ್ಲಿ ಪ್ರಕಟಿಸಲಾಗಿತ್ತು. ಈ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ನವೆಂಬರ್ 19ರ ಬೆಳಿಗ್ಗೆ 10.30ರೊಳಗೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಅದರಂತೆ ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಲಾಗಿದೆ. ಪರಿಶೀಲನೆಯ ಬಳಿಕ ಪರಿಷ್ಕೃತ ಕೀ ಉತ್ತರಗಳನ್ನು ನವೆಂಬರ್ 21ರಂದು ಪ್ರಕಟಿಸಲಾಗಿದೆ.

ಪರಿಷ್ಕೃತ ಕೀ ಉತ್ತರಗಳ ಆಧಾರದ ಮೇಲೆ ಅಭ್ಯರ್ಥಿಗಳು ಪೂರ್ವಭಾವಿ ಪರೀಕ್ಷೆಯಲ್ಲಿ ಗಳಿಸಿರುವ ಅಂಕಗಳ ತಾತ್ಕಾಲಿಕ ಫಲಿತಾಂಶವನ್ನು ಇದೀಗ ಪ್ರಕಟಿಸಲಾಗಿದೆ.

ಪ್ರಕಟಿತ ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ನವೆಂಬರ್ 23ರ ಬೆಳಿಗ್ಗೆ 11 ಗಂಟೆಯೊಳಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಇದಕ್ಕಾಗಿ ಆಯೋಗವು ಸೂಚಿಸಿರುವ ಗೂಗಲ್ ದಾಖಲೆ ಸಲ್ಲಿಕೆ ಕೊಂಡಿಯನ್ನು ಬಳಸಬೇಕು.

ಸೂಕ್ತ ಪೂರಕ ದಾಖಲೆಗಳಿಲ್ಲದೆ ಸಲ್ಲಿಸುವ ಆಕ್ಷೇಪಣೆಗಳನ್ನು ಹಾಗೂ ಕೀ ಉತ್ತರಗಳಿಗೆ ಸಂಬಂಧಿಸಿದ ಆಕ್ಷೇಪಣೆಗಳನ್ನು ಈ ಹಂತದಲ್ಲಿ ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗ ಸ್ಪಷ್ಟಪಡಿಸಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande