ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಚುನಾವಣೆಯ 37 ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ
ಬಾಗಲಕೋಟೆ, 24 ನವೆಂಬರ್ (ಹಿ.ಸ.) ಬಾಗಲಕೋಟೆ: ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲಾ ಪಂಚಾಯಿತಿಯ 37 ಕ್ಷೇತ್ರಗಳ ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕ ರಾಜ್ಯಪತ್ರದಲ್ಲಿ ಈ ಕುರಿತು ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಜಿಲ್ಲೆಯ ಒಟ್ಟು 37 ಜ
ಮಿಲಸತಿ ಪ್ರಕಟ


ಬಾಗಲಕೋಟೆ, 24 ನವೆಂಬರ್ (ಹಿ.ಸ.)

ಬಾಗಲಕೋಟೆ: ಮುಂಬರುವ ಜಿಲ್ಲಾ ಪಂಚಾಯಿತಿ ಚುನಾವಣೆಯ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲಾ ಪಂಚಾಯಿತಿಯ 37 ಕ್ಷೇತ್ರಗಳ ಕ್ಷೇತ್ರವಾರು ಮೀಸಲಾತಿ ಪಟ್ಟಿ ಪ್ರಕಟಗೊಂಡಿದೆ.

ಕರ್ನಾಟಕ ರಾಜ್ಯಪತ್ರದಲ್ಲಿ ಈ ಕುರಿತು ಅಧಿಕೃತ ಅಧಿಸೂಚನೆ ಪ್ರಕಟವಾಗಿದ್ದು, ಜಿಲ್ಲೆಯ ಒಟ್ಟು 37 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಅನ್ವಯವಾಗುವ ಮೀಸಲಾತಿ ವಿವರಗಳನ್ನು ಬಿಡುಗಡೆ ಮಾಡಲಾಗಿದೆ.

ಯಾವ ಕ್ಷೇತ್ರಕ್ಕೆ ಯಾವ ವರ್ಗದ ಮೀಸಲಾತಿ ನಿಗದಿಯಾಗಿದೆ ಎಂಬುದರ ಕುರಿತು ಸಾರ್ವಜನಿಕರಲ್ಲಿ ಹಾಗೂ ಚುನಾವಣಾ ಆಕಾಂಕ್ಷಿಗಳಲ್ಲಿ ಕುತೂಹಲ ಮೂಡಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗ ಸೇರಿದಂತೆ ವಿವಿಧ ಮೀಸಲಾತಿ ವರ್ಗಗಳ ಕ್ಷೇತ್ರವಾರು ವಿವರಗಳನ್ನು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಪಂಚಾಯಿತಿ ಅಧಿಕಾರಿ ತಾತಯ್ಯ ಕುಂಬಾರಗೇರಿಮಠ ಅವರು, ಬಾಗಲಕೋಟೆ ಜಿಲ್ಲಾ ಪಂಚಾಯಿತಿಯ 37 ಕ್ಷೇತ್ರಗಳ ಸಂಪೂರ್ಣ ಮೀಸಲಾತಿ ಪಟ್ಟಿಯನ್ನು ಸಾರ್ವಜನಿಕರ ಗಮನಕ್ಕೆ ತರಲಾಗಿದೆ. ಸಾರ್ವಜನಿಕರು ತಮ್ಮ ಕ್ಷೇತ್ರಕ್ಕೆ ಯಾವ ವರ್ಗದ ಮೀಸಲಾತಿ ನಿಗದಿಯಾಗಿದೆ ಎಂಬುದನ್ನು ಅಧಿಕೃತ ಪಟ್ಟಿಯಲ್ಲಿ ಪರಿಶೀಲಿಸಿಕೊಳ್ಳಬೇಕು ಎಂದು ತಿಳಿಸಿದರು.

ಮೀಸಲಾತಿ ಪಟ್ಟಿ ಪ್ರಕಟವಾಗುತ್ತಿದ್ದಂತೆ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಹೊಂದಿರುವ ಆಕಾಂಕ್ಷಿಗಳು ತಮ್ಮ ಕ್ಷೇತ್ರಗಳ ಮೀಸಲಾತಿ ವಿವರಗಳ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಜಿಲ್ಲೆಯ ಸಾರ್ವಜನಿಕರು ತಮ್ಮ ಕ್ಷೇತ್ರದ ಹೆಸರಿನೊಂದಿಗೆ ಮೀಸಲಾತಿ ವಿವರಗಳನ್ನು ಪರಿಶೀಲಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande