ಬಳ್ಳಾರಿ-ವ್ಯಕ್ತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ, 24 ನವೆಂಬರ್ (ಹಿ.ಸ.) ಬಳ್ಳಾರಿ ನಗರದ ಬಾಪೂಜಿ ನಗರ ಬಡಾವಣೆಯ ಬಿಸ್ಕೇಟ್ ಫ್ಯಾಕ್ಟರಿ ಹತ್ತಿರದ ನಿವಾಸಿಯಾದ ಶಿವಪ್ಪ (59) ನ.22 ರಂದು ಮನೆಯಿಂದ ಕಾಣೆಯಾಗಿರುವ ಕುರಿತು ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವ್ಯಕ್ತಿಯ ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ
ಬಳ್ಳಾರಿ-ವ್ಯಕ್ತಿ ಕಾಣೆ: ಪತ್ತೆಗೆ ಮನವಿ


ಬಳ್ಳಾರಿ, 24 ನವೆಂಬರ್ (ಹಿ.ಸ.)

ಬಳ್ಳಾರಿ ನಗರದ ಬಾಪೂಜಿ ನಗರ ಬಡಾವಣೆಯ ಬಿಸ್ಕೇಟ್ ಫ್ಯಾಕ್ಟರಿ ಹತ್ತಿರದ ನಿವಾಸಿಯಾದ ಶಿವಪ್ಪ (59) ನ.22 ರಂದು ಮನೆಯಿಂದ ಕಾಣೆಯಾಗಿರುವ ಕುರಿತು ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವ್ಯಕ್ತಿಯ ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.

ವ್ಯಕ್ತಿಯ ಚಹರೆ:

ಅಂದಾಜು 5.6 ಅಡಿ ಎತ್ತರ, ದುಂಡು ಮುಖ, ಕೆಂಪು ಮೈ ಬಣ್ಣ, ದೃಢವಾದ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ತಿಳಿ ನೇರಳೆ ಬಣ್ಣದ ತುಂಬು ತೋಳಿನ ಅಂಗಿ, ಬಿಳಿ ಬಣ್ಣದ ಲುಂಗಿ ಧರಿಸಿರುತ್ತಾನೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾನೆ.

ಈ ಮೇಲ್ಕಂಡ ಚಹರೆ ಗುರುತುಗಳುಳ್ಳ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಅಥವಾ ಎಪಿಎಂಸಿ ಯಾರ್ಡ್ ಪೊಲೀಸ್ ಠಾಣೆಯ ದೂ.08392-250033 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande