
ಬಳ್ಳಾರಿ, 24 ನವೆಂಬರ್ (ಹಿ.ಸ.)
‘ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನೆಗೆ ಅಂತರಾಷ್ಟಿಯ ದಿನ'ದ ಅಂಗವಾಗಿ ‘ಕಾರ್ಯಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ತಡೆ ಕಾಯ್ದೆ - 2013' ಕುರಿತು ನವೆಂಬರ್ 25 ರಂದು ಸಂಜೆ 4.30ಕ್ಕೆ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬಳ್ಳಾರಿ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಿದ್ದಲಿಂಗ ಪ್ರಭು ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಬಳ್ಳಾರಿಯ ಎಲ್ಲಾ ನ್ಯಾಯಾಲಯಗಳ ನ್ಯಾಯಾಧೀಶರು ಮತ್ತು ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಸಿಬ್ಬಂದಿ ವರ್ಗದವರು ಉಪಸ್ಥಿತರಿರಲಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮತ್ತು ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನೆ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್