ಬಳ್ಳಾರಿಯಲ್ಲಿ ನ. 26ರಿಂದ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ
ಬಳ್ಳಾರಿ, 24 ನವೆಂಬರ್ (ಹಿ.ಸ.) 2026-27ನೇ ಸಾಲಿನ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗಳು ಬಳ್ಳಾರಿಯಲ್ಲಿ ನಡೆಯಲಿವೆ. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನವೆಂಬರ್ 26 ರಿಂದ ನವೆಂಬರ್ 29 ರವರೆಗೆ ಈ ಪಂದ್ಯಾವಳಿಗಳು ಜರುಗಲಿವೆ. ಪಂದ್ಯಾವಳಿಯ ಉ
ಬಳ್ಳಾರಿಯಲ್ಲಿ  ನ. 26ರಿಂದ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿ


ಬಳ್ಳಾರಿ, 24 ನವೆಂಬರ್ (ಹಿ.ಸ.)

2026-27ನೇ ಸಾಲಿನ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಗಳು ಬಳ್ಳಾರಿಯಲ್ಲಿ ನಡೆಯಲಿವೆ. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನವೆಂಬರ್ 26 ರಿಂದ ನವೆಂಬರ್ 29 ರವರೆಗೆ ಈ ಪಂದ್ಯಾವಳಿಗಳು ಜರುಗಲಿವೆ.

ಪಂದ್ಯಾವಳಿಯ ಉದ್ಘಾಟನಾ ಸಮಾರಂಭವು ನವೆಂಬರ್ 26 ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಜಿಲ್ಲಾ ಪಂಚಾಯತ್ ಬಳ್ಳಾರಿ, ತಾಲ್ಲೂಕು ಪಂಚಾಯತ್ ಬಳ್ಳಾರಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಾರ್ಯಾಲಯದ ವತಿಯಿಂದ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande