ಕಾತರಕಿಯಲ್ಲಿ ನ.26ರಂದು ಶೌಚಾಲಯ ಬಳಕೆ ಜಾಗೃತಿ ಕಾರ್ಯಕ್ರಮ
ಬಾಗಲಕೋಟೆ, 24 ನವೆಂಬರ್ (ಹಿ.ಸ.) ಬಾದಾಮಿ ಸ್ವಚ್ಛತೆ, ಆರೋಗ್ಯ ಮತ್ತು ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸುವ ಉದ್ದೇಶದಿಂದ ನವೆಂಬರ್ 26ರಂದು ಕಾತರಕಿಯಲ್ಲಿ ಶೌಚಾಲಯ ಬಳಕೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಆಯೋಜಕ ಆನಂದ ಹಿರೇಮನಿ ತಿಳಿಸಿದ್ದಾರೆ. ಮಹಾತ್
ಶೌಚಾಲಯ ಜಾಗೃತಿ


ಬಾಗಲಕೋಟೆ, 24 ನವೆಂಬರ್ (ಹಿ.ಸ.)

ಬಾದಾಮಿ ಸ್ವಚ್ಛತೆ, ಆರೋಗ್ಯ ಮತ್ತು ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸುವ ಉದ್ದೇಶದಿಂದ ನವೆಂಬರ್ 26ರಂದು ಕಾತರಕಿಯಲ್ಲಿ ಶೌಚಾಲಯ ಬಳಕೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮದ ಆಯೋಜಕ ಆನಂದ ಹಿರೇಮನಿ ತಿಳಿಸಿದ್ದಾರೆ.

ಮಹಾತ್ಮ ಗಾಂಧಿ ಪಂಚಾಯಿತಿ, ಮಂಗಳೂರು ಹಾಗೂ ಚಾಣಕ್ಯ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಬಾದಾಮಿ ಇವರ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಬಯಲು ಶೌಚ ಮುಕ್ತ ಗ್ರಾಮ ನಿರ್ಮಾಣ ಮಾಡುವುದು ನಮ್ಮೆಲ್ಲರ ಸಂಕಲ್ಪವಾಗಬೇಕು ಎಂಬ ಆಶಯದೊಂದಿಗೆ ಈ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರಲ್ಲಿ ಶೌಚಾಲಯ ಬಳಕೆಯ ಮಹತ್ವದ ಕುರಿತು ಅರಿವು ಮೂಡಿಸುವುದು, ವೈಯಕ್ತಿಕ ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ತಿಳಿವಳಿಕೆ ನೀಡುವುದು ಹಾಗೂ ಗ್ರಾಮಗಳ ಸ್ವಚ್ಛತೆ ಕಾಪಾಡುವಲ್ಲಿ ಜನಸಹಭಾಗಿತ್ವವನ್ನು ಉತ್ತೇಜಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

**ನವೆಂಬರ್ 26ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ** ಮಹಾತ್ಮ ಗಾಂಧಿ ಪಂಚಾಯಿತಿ ಕಚೇರಿ ಆವರಣ, ಕಾತರಕಿಯಲ್ಲಿ ಕಾರ್ಯಕ್ರಮ ನಡೆಯಲಿದೆ.

ಮಹಾತ್ಮ ಗಾಂಧಿ ಪಂಚಾಯಿತಿ ವ್ಯಾಪ್ತಿಯ ಮಂಗಳೂರು, ಶಿರಬಡಗಿ, ಗೋನಾಳ, ನವಿಲು ಹೊಳೆ ಹಾಗೂ ಹಿರೇನಸಬಿ ಗ್ರಾಮಗಳ ಸಮಸ್ತ ಮಹಿಳೆಯರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಆಯೋಜಕರು ಆಹ್ವಾನಿಸಿದ್ದಾರೆ.

ಶೌಚಾಲಯ ಬಳಕೆಯಿಂದ ವೈಯಕ್ತಿಕ ಆರೋಗ್ಯದ ರಕ್ಷಣೆ ಸಾಧ್ಯವಾಗುವುದರ ಜೊತೆಗೆ ಗ್ರಾಮಗಳ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯಲ್ಲಿಯೂ ಮಹತ್ವದ ಪಾತ್ರ ವಹಿಸಬಹುದು. ಪ್ರತಿಯೊಂದು ಕುಟುಂಬವೂ ಶೌಚಾಲಯ ಬಳಕೆಯನ್ನು ದೈನಂದಿನ ಜೀವನದ ಭಾಗವಾಗಿಸಿಕೊಂಡಾಗ ಮಾತ್ರ ಸ್ವಚ್ಛ ಹಾಗೂ ಆರೋಗ್ಯವಂತ ಗ್ರಾಮ ನಿರ್ಮಾಣದ ಸಂಕಲ್ಪ ಸಾಕಾರಗೊಳ್ಳಲು ಸಾಧ್ಯ ಎಂಬ ಸಂದೇಶವನ್ನು ಜನರಿಗೆ ತಲುಪಿಸುವ ಉದ್ದೇಶವನ್ನು ಕಾರ್ಯಕ್ರಮ ಹೊಂದಿದೆ.

ಶೌಚಾಲಯ ಬಳಸಿ – ಆರೋಗ್ಯ ಕಾಪಾಡಿ-ಸ್ವಚ್ಛ ಗ್ರಾಮ ನಿರ್ಮಿಸಿಎಂಬ ಘೋಷವಾಕ್ಯದೊಂದಿಗೆ ನಡೆಯುವ ಈ ಜಾಗೃತಿ ಕಾರ್ಯಕ್ರಮಕ್ಕೆ ಆಗಮಿಸಿ ಅಭಿಯಾನಕ್ಕೆ ಕೈಜೋಡಿಸುವಂತೆ ಆನಂದ ಹಿರೇಮನಿ ಹಾಗೂ ಸಂಘಟಕರು ಮನವಿ

ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande