ಮಾನಸಿಕ ಆರೋಗ್ಯ ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ
ಗದಗ, 25 ನವೆಂಬರ್ (ಹಿ.ಸ.) ಶಾಲಾ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಕಾರ್ಯಕ್ರಮದಡಿ 2026-27ನೇ ಸಾಲಿನಲ್ಲಿ ಪ್ರೌಢ ಹಾಗೂ ಪದವಿ ಪೂರ್ವ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ ಮಾನಸಿಕ ಆರೋಗ್ಯ ಸಮಾಲೋಚ
ಫೋಟೋ


ಗದಗ, 25 ನವೆಂಬರ್ (ಹಿ.ಸ.)

ಶಾಲಾ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಕಾರ್ಯಕ್ರಮದಡಿ 2026-27ನೇ ಸಾಲಿನಲ್ಲಿ ಪ್ರೌಢ ಹಾಗೂ ಪದವಿ ಪೂರ್ವ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ ಮಾನಸಿಕ ಆರೋಗ್ಯ ಸಮಾಲೋಚಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ತಾಲೂಕು ಬಿಆರ್ಸಿ ಕಚೇರಿಗಳಲ್ಲಿ ತಲಾ ಒಬ್ಬರಂತೆ ಮಾನಸಿಕ ಆರೋಗ್ಯ ಸಮಾಲೋಚಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗುತ್ತಿದೆ.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮನೋವಿಜ್ಞಾನ, ಕ್ಲಿನಿಕಲ್ ಮನೋವಿಜ್ಞಾನ, ಕೌನ್ಸೆಲಿಂಗ್ ಮನೋವಿಜ್ಞಾನ ಅಥವಾ ಸಂಬಂಧಿತ ವಿಷಯಗಳಲ್ಲಿ ಎಂ.ಎ./ಎಂ.ಎಸ್ಸಿ ಪದವಿ ಹೊಂದಿರಬೇಕು. ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 26 ವರ್ಷದಿಂದ ಗರಿಷ್ಠ 50 ವರ್ಷಗಳವರೆಗೆ ಇರಬೇಕು.

ಅರ್ಜಿ ನಮೂನೆಯನ್ನು ಗದಗದ ಸಮಗ್ರ ಶಿಕ್ಷಣ ಕರ್ನಾಟಕ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು. ನವೆಂಬರ್ 25ರಿಂದ ಡಿಸೆಂಬರ್ 1, 2026ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಡಿಸೆಂಬರ್ 1ರ ನಂತರ ಸಲ್ಲಿಕೆಯಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9448999396 ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande