ಲಾಲ್ ಬಾಗ್ ಒಳಗೆ ಸುರಂಗ ರಸ್ತೆ ನಿರ್ಮಾಣ ಇಲ್ಲ: ಸಚಿವ ಕೃಷ್ಣಬೈರೇಗೌಡ ಸ್ಪಷ್ಟನೆ
ಲಾಲ್ಬಾಗ್ ಉದ್ಯಾನದ ಒಳಭಾಗದಲ್ಲಿ ಸುರಂಗ ರಸ್ತೆ ನಿರ್ಮಿಸುವುದಿಲ್ಲ ಎಂದು ಸಚಿವ ಕೃಷ್ಣಬೈರೇಗೌಡ ಅಧಿಕೃತವಾಗಿ ಘೋಷಿಸಿದ್ದು, ಯೋಜನೆ ಕುರಿತ ಚರ್ಚೆಗೆ ತೆರೆ ಎಳೆದಿದ್ದಾರೆ.
Lalbagh-Tunnel-Road-Project-Cancelled-Krishna-Byregowda-Announcement


ಬೆಂಗಳೂರು, 25 ನವೆಂಬರ್ (ಹಿ.ಸ.):

ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಿಸುವ ಉದ್ದೇಶದಿಂದ ಪ್ರಸ್ತಾಪಿಸಲಾಗಿದ್ದ ಸುರಂಗ ರಸ್ತೆ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ.

ನಗರದ ಹಸಿರು ತಾಣವಾಗಿರುವ ಲಾಲ್ಬಾಗ್ ಒಳಭಾಗದಲ್ಲಿ ಯಾವುದೇ ಕಾರಣಕ್ಕೂ ಸುರಂಗ ರಸ್ತೆ ನಿರ್ಮಿಸುವುದಿಲ್ಲ ಎಂದು ಸಚಿವ ಕೃಷ್ಣಬೈರೇಗೌಡ ಅಧಿಕೃತವಾಗಿ ಘೋಷಿಸಿದ್ದಾರೆ.

ಲಾಲ್ಬಾಗ್ನ ಪರಿಸರ, ಹಸಿರು ಸಂಪತ್ತು ಹಾಗೂ ಜೀವವೈವಿಧ್ಯಕ್ಕೆ ಧಕ್ಕೆಯಾಗುವ ಆತಂಕದ ಹಿನ್ನೆಲೆಯಲ್ಲಿ ಈ ಸ್ಪಷ್ಟನೆ ಮಹತ್ವ ಪಡೆದುಕೊಂಡಿದೆ. ಸುರಂಗ ರಸ್ತೆ ನಿರ್ಮಾಣದ ಪ್ರಸ್ತಾಪಕ್ಕೆ ಪರಿಸರ ಪ್ರೇಮಿಗಳು ಹಾಗೂ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗಿತ್ತು.

ಈ ಕುರಿತು ಸ್ಪಷ್ಟನೆ ನೀಡಿರುವ ಸಚಿವ ಕೃಷ್ಣಬೈರೇಗೌಡ ಅವರು, ಲಾಲ್ಬಾಗ್ ಒಳಗೆ ಸುರಂಗ ರಸ್ತೆ ನಿರ್ಮಿಸುವ ಯಾವುದೇ ಉದ್ದೇಶ ಸರ್ಕಾರಕ್ಕಿಲ್ಲ ಎಂದು ತಿಳಿಸಿದ್ದಾರೆ.

ನಗರದ ಅಭಿವೃದ್ಧಿ ಹಾಗೂ ಸಂಚಾರ ದಟ್ಟಣೆ ನಿಯಂತ್ರಣದ ಹೆಸರಿನಲ್ಲಿ ಪರಿಸರ ಸೂಕ್ಷ್ಮ ಪ್ರದೇಶಗಳಿಗೆ ಹಾನಿಯಾಗಬಾರದು ಎಂಬ ಸಾರ್ವಜನಿಕರ ಕಳವಳದ ನಡುವೆ ಸಚಿವರ ಈ ಹೇಳಿಕೆ ಮಹತ್ವ ಪಡೆದಿದೆ.

ಲಾಲ್ಬಾಗ್ನ ಅಸ್ತಿತ್ವ ಮತ್ತು ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸರ್ಕಾರದ ನಿಲುವನ್ನು ಸಚಿವರು ಸ್ಪಷ್ಟಪಡಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande