ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆ ಅವಶ್ಯಕ: ಜಿಲ್ಲಾಧಿಕಾರಿ
ಬಳ್ಳಾರಿ, 25 ನವೆಂಬರ್ (ಹಿ.ಸ.) ಮಾನಸಿಕ ಒತ್ತಡದ ಜೀವನ ಶೈಲಿಯಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಯಾವುದಾದರೂ ಒಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡೆಯಲ್ಲಿ ಭಾಗವಹಿಸುವುದರ ಜೊತೆಗೆ ಕ್ರೀಡಾಸ್ಫೂರ್ತಿ ಮತ್ತು ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು ಎಂದು ಜ
ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆ ಅವಶ್ಯಕ: ಜಿಲ್ಲಾಧಿಕಾರಿ


ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆ ಅವಶ್ಯಕ: ಜಿಲ್ಲಾಧಿಕಾರಿ


ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆ ಅವಶ್ಯಕ: ಜಿಲ್ಲಾಧಿಕಾರಿ


ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆ ಅವಶ್ಯಕ: ಜಿಲ್ಲಾಧಿಕಾರಿ


ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆ ಅವಶ್ಯಕ: ಜಿಲ್ಲಾಧಿಕಾರಿ


ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡೆ ಅವಶ್ಯಕ: ಜಿಲ್ಲಾಧಿಕಾರಿ


ಬಳ್ಳಾರಿ, 25 ನವೆಂಬರ್ (ಹಿ.ಸ.)

ಮಾನಸಿಕ ಒತ್ತಡದ ಜೀವನ ಶೈಲಿಯಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಯಾವುದಾದರೂ ಒಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡೆಯಲ್ಲಿ ಭಾಗವಹಿಸುವುದರ ಜೊತೆಗೆ ಕ್ರೀಡಾಸ್ಫೂರ್ತಿ ಮತ್ತು ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಹೇಳಿದರು.

ಬುಧವಾರ ನಗರದ ಜಿಲ್ಲಾ ಪೊಲೀಸ್ ಕವಾಯತು (ಡಿಎಆರ್) ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ, ಬಳ್ಳಾರಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2026 ಎಂಬ ಕಾರ್ಯಕ್ರಮಕ್ಕೆ ಬಲೂನ್ಗಳನ್ನು ಹಾರಿಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಪೊಲೀಸ್ ಇಲಾಖೆಯ ಸಿಬ್ಬಂದಿ ದಿನನಿತ್ಯದ ಕರ್ತವ್ಯದ ಒತ್ತಡದ ನಡುವೆಯೂ ತಮ್ಮ ದೈಹಿಕ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಸಿಬ್ಬಂದಿ ಉತ್ತಮ ಆರೋಗ್ಯ ಮತ್ತು ದೈಹಿಕ ಸಾಮರ್ಥ್ಯ ಹೊಂದಿದ್ದರೆ ಮಾತ್ರ ಕರ್ತವ್ಯಗಳನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯ. ಈ ನಿಟ್ಟಿನಲ್ಲಿ ವಾರ್ಷಿಕ ಕ್ರೀಡಾಕೂಟಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದರು.

ಕ್ರೀಡೆಗಳು ಕೇವಲ ಗೆಲುವು ಮತ್ತು ಸೋಲಿಗೆ ಸೀಮಿತವಾಗಿಲ್ಲ. ಅವು ಶಿಸ್ತು, ಸಮಯಪ್ರಜ್ಞೆ, ಆತ್ಮವಿಶ್ವಾಸ, ಪರಸ್ಪರ ಸಹಕಾರ ಹಾಗೂ ತಂಡದ ಮನೋಭಾವವನ್ನು ಬೆಳೆಸುತ್ತವೆ. ಆದ್ದರಿಂದ ಪ್ರತಿಯೊಬ್ಬರೂ ಕ್ರೀಡಾಕೂಟಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಮಾತನಾಡಿ, ಪೊಲೀಸ್ ಇಲಾಖೆಯ ಸಿಬ್ಬಂದಿ ಸಾರ್ವಜನಿಕರ ಹಿತಾಸಕ್ತಿ, ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ನಿರಂತರವಾಗಿ ಕಾರ್ಯನಿರ್ವಹಿಸುವುದರಿಂದ ಸಹಜವಾಗಿಯೇ ಮಾನಸಿಕ ಒತ್ತಡ ಎದುರಿಸಬೇಕಾಗುತ್ತದೆ. ಇಂತಹ ಸಂದರ್ಭದಲ್ಲಿ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದು ಒತ್ತಡ ನಿವಾರಣೆಗೆ ಸಹಕಾರಿಯಾಗಿದೆ. ಸುಖಕರ ಜೀವನಕ್ಕೆ ಆರೋಗ್ಯವೇ ಪ್ರಮುಖವಾಗಿದ್ದು, ಅದನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಪೊಲೀಸ್ ಸಿಬ್ಬಂದಿ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.

ಬಳ್ಳಾರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಬಸವರಾಜ ಕೆ.ಎನ್. ಮಾತನಾಡಿ, ಮಾನಸಿಕ ಒತ್ತಡದಿಂದ ದೂರವಿದ್ದು ಆರೋಗ್ಯಕರ ಜೀವನ ನಡೆಸುವ ಉದ್ದೇಶದಿಂದ ಇಂತಹ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತದೆ. ಯಾವುದೇ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ನಿರಂತರ ಅಭ್ಯಾಸ ಮತ್ತು ಪರಿಶ್ರಮ ಅಗತ್ಯ ಎಂದು ತಿಳಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸುವ ಕೋಟೆ, ದುರ್ಗಾ, ಸಂಸ್ಕೃತಿ, ಸ್ಪಂದನ, ವೇದಾವತಿ, ಸ್ಪಂದಗಿರಿ ಹಾಗೂ ತುಂಗಾ ತಂಡಗಳು ಪಥಸಂಚಲನ ಮೂಲಕ ಎಲ್ಲರ ಗಮನ ಸೆಳೆಯಿತು.

ಕ್ರೀಡಾಕೂಟದಲ್ಲಿ ಪೊಲೀಸ್ ಇಲಾಖೆಯ ವಿವಿಧ ಘಟಕಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ಡಾ. ಸುಮನ್ ಡಿ. ಪೆನ್ನೇಕರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಹೆಚ್ಚುವರಿ ಪೊಲೀಸ್ ಅಧೀಕ್ಷಕ ನವೀನ್ ಕುಮಾರ್ ಎನ್. ಸೇರಿದಂತೆ ಜಿಲ್ಲೆಯ ವಿವಿಧ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande