ಗದಗ:ನ.೨೭ರಂದು ಕನಕದಾಸ ಜಯಂತಿ
ಗದಗ, 25 ನವೆಂಬರ್ (ಹಿ.ಸ.) ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ದಾಸಶ್ರೇಷ್ಠ ಸಂತ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ನವೆಂಬರ್ 27ರಂದು ಶುಕ್ರವಾರ ಗದಗ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂದು ಬೆಳಿಗ್ಗೆ 9 ಗಂಟೆಗ
ಫೋಟೋ


ಗದಗ, 25 ನವೆಂಬರ್ (ಹಿ.ಸ.)

ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ದಾಸಶ್ರೇಷ್ಠ ಸಂತ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ನವೆಂಬರ್ 27ರಂದು ಶುಕ್ರವಾರ ಗದಗ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ 9 ಗಂಟೆಗೆ ನಗರದ ಹಾತಲಗೇರಿ ನಾಕಾದಲ್ಲಿರುವ ಸಂತ ಕನಕದಾಸರ ವೃತ್ತಕ್ಕೆ ಪೂಜೆ ಹಾಗೂ ಪುಷ್ಪಾರ್ಚನೆ ನೆರವೇರಿಸಲಾಗುವುದು. ಬಳಿಕ ಬೆಳಿಗ್ಗೆ 10.30ಕ್ಕೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ನಲ್ಲಿ ಜಯಂತಿ ವೇದಿಕೆ ಕಾರ್ಯಕ್ರಮ ಜರುಗಲಿದೆ.

ಉನ್ನತ ಶಿಕ್ಷಣ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಗದಗ ಶಾಸಕ ಡಾ. ಎಚ್.ಕೆ. ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್, ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್. ಪಾಟೀಲ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಸಂಸದ ಪಿ.ಸಿ. ಗದ್ದಿಗೌಡರ, ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್. ಪಾಟೀಲ, ನರಗುಂದ ಶಾಸಕ ಸಿ.ಸಿ. ಪಾಟೀಲ, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಎಸ್.ವಿ. ಸಂಕನೂರ, ಪ್ರದೀಪ್ ಶೆಟ್ಟರ್, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಹಾಗೂ ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಸಹಕಾರ ಸಂಘಗಳ ನಿಬಂಧಕ ಡಾ. ಎಂ.ವಿ. ವೆಂಕಟೇಶ ಮತ್ತು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ. ಆಗಮಿಸಲಿದ್ದಾರೆ.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಎಚ್.ಎನ್., ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್. ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ ಸಾರ್ವಜನಿಕರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande