ಅಖಿಲ ಭಾರತ ವೀರಶೈವ ಮಹಾಸಭಾ ಸಿಂದಗಿ ನಗರ ಯುವ ಘಟಕದ ಅಧ್ಯಕ್ಷರಾಗಿ ಬಸ್ಸು ಸಜ್ಜನ ಆಯ್ಕೆ
ವಿಜಯಪುರ, 26 ನವೆಂಬರ್ (ಹಿ.ಸ.) ಅಖಿಲ ಭಾರತ ವೀರಶೈವ ಮಹಾಸಭಾದ ಸಿಂದಗಿ ತಾಲ್ಲೂಕಿನ ನಗರ ಯುವ ಘಟಕದ ಅಧ್ಯಕ್ಷರಾಗಿ ಹಾಗೂ ಸಿಂದಗಿ ಯುವ ಘಟಕದ ಉಸ್ತುವಾರಿಯಾಗಿ ಬಸ್ಸು ಸಜ್ಜನ ಅವರನ್ನು ಆಯ್ಕೆ ಮಾಡಲಾಗಿದೆ. ಈ ಆಯ್ಕೆಗೆ ಸಂತಸ ವ್ಯಕ್ತಪಡಿಸಿರುವ ಬಸ್ಸು ಸಜ್ಜನ ಅವರು, ತಮ್ಮ ಮೇಲೆ ವಿಶ್ವಾಸವಿಟ್ಟು ಜವಾಬ್ದಾ
ಆಯ್ಕೆ


ವಿಜಯಪುರ, 26 ನವೆಂಬರ್ (ಹಿ.ಸ.)

ಅಖಿಲ ಭಾರತ ವೀರಶೈವ ಮಹಾಸಭಾದ ಸಿಂದಗಿ ತಾಲ್ಲೂಕಿನ ನಗರ ಯುವ ಘಟಕದ ಅಧ್ಯಕ್ಷರಾಗಿ ಹಾಗೂ ಸಿಂದಗಿ ಯುವ ಘಟಕದ ಉಸ್ತುವಾರಿಯಾಗಿ ಬಸ್ಸು ಸಜ್ಜನ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಆಯ್ಕೆಗೆ ಸಂತಸ ವ್ಯಕ್ತಪಡಿಸಿರುವ ಬಸ್ಸು ಸಜ್ಜನ ಅವರು, ತಮ್ಮ ಮೇಲೆ ವಿಶ್ವಾಸವಿಟ್ಟು ಜವಾಬ್ದಾರಿ ನೀಡಿದ ಜಿಲ್ಲಾ ಯುವ ಘಟಕದ ಅಧ್ಯಕ್ಷರಿಗೆ ಹಾಗೂ ಆಯ್ಕೆಗೆ ಸಹಕರಿಸಿದ ಎಲ್ಲ ಗುರುಹಿರಿಯರಿಗೆ ಗೌರವಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಸಮಾಜದ ಸಂಘಟನೆ, ಯುವಕರ ಒಗ್ಗಟ್ಟು ಹಾಗೂ ಸಮಾಜದ ಅಭಿವೃದ್ಧಿಗಾಗಿ ಶ್ರಮಿಸುವ ಉದ್ದೇಶದಿಂದ ಈ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುವುದಾಗಿ ತಿಳಿಸಿದ್ದಾರೆ.

ಸಮಾಜದ ಹಿರಿಯರ ಮಾರ್ಗದರ್ಶನ ಹಾಗೂ ಯುವಕರ ಸಹಕಾರದೊಂದಿಗೆ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುವುದಾಗಿ ಬಸ್ಸು ಸಜ್ಜನ ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande