ನಾಳೆ ಭಕ್ತ ಕನಕದಾಸರ ಜಯಂತಿ ಆಚರಣೆ ಪೂರ್ವಭಾವಿ ಸಿದ್ಧತೆ ಸಭೆ
ಬಾಗಲಕೋಟೆ , 26 ನವೆಂಬರ್ (ಹಿ.ಸ.) ಬಾದಾಮಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ಸಹಯೋಗದಲ್ಲಿ ಸಂತಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ನ.27ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನಗರದ ಪಿಕಾರ್ಡ್ ಬ್ಯಾಂಕ್ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ತಹಶೀಲ್ದಾರ್ ಅಮರೇಶ ಪಮ್ಮಾರ ಪ್ರಕಟಣೆಯಲ
Jayanti


ಬಾಗಲಕೋಟೆ , 26 ನವೆಂಬರ್ (ಹಿ.ಸ.)

ಬಾದಾಮಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ಸಹಯೋಗದಲ್ಲಿ ಸಂತಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ನ.27ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ನಗರದ ಪಿಕಾರ್ಡ್ ಬ್ಯಾಂಕ್ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ತಹಶೀಲ್ದಾರ್ ಅಮರೇಶ ಪಮ್ಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಘನ ಉಪಸ್ಥಿತಿ ಇರಲಿದ್ದು, ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಉಪಸಭಾಪತಿ ಡಾ.ಉಮಾಶ್ರೀ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಬೀಳಗಿ ಶಾಸಕ ಜೆ.ಟಿ.ಪಾಟೀಲ, ಸಂಸದ ಪಿ.ಸಿ.ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಬಾಂಡಗೆ, ವಿಧಾನ ಪರಿಷತ್ ಸದಸ್ಯರಾದ ಹನಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ನಿಗಮ ಮಂಡಳಿ ಅಧ್ಯಕ್ಷ ಎಸ್.ಜಿ.ನಂಜಯ್ಯನಮಠ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅನಿಲಕುಮಾರ ದಡ್ಡಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ಹಿರೇಮಠ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮಾಗುಂಡಪ್ಪ ಬೂದಿಹಾಳ ಹಾಗೂ ತಾಲೂಕು ಕುರುಬರ ಸಂಘದ ತಾತ್ಕಾಲಿಕ ಅಧ್ಯಕ್ಷ ಶ್ರೀಕಾಂತಗೌಡ ಗೌಡರ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಭಾವಚಿತ್ರ ಮೆರವಣಿಗೆ:

ಜಯಂತಿ ಅಂಗವಾಗಿ ಬೆಳಿಗ್ಗೆ 9 ಗಂಟೆಗೆ ನಗರದ ಶ್ರೀ ಬೀರಲಿಂಗೇಶ್ವರ ಸಮುದಾಯ ಭವನದಿಂದ ಭಕ್ತ ಕನಕದಾಸರ ಭಾವಚಿತ್ರದ ಭವ್ಯ ಮೆರವಣಿಗೆ ಆರಂಭವಾಗಿ ಪಿಕಾರ್ಡ್ ಬ್ಯಾಂಕ್ ಆವರಣದವರೆಗೆ ಸಾಗಲಿದೆ.

ನಂತರ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಡಾ.ಯಶವಂತ ಕೊಕ್ಕನವರ ಅವರು ಭಕ್ತ ಕನಕದಾಸರ ಜೀವನ, ಸಾಧನೆ, ಸಾಹಿತ್ಯ ಹಾಗೂ ಸಾಮಾಜಿಕ ಚಿಂತನೆಗಳ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.

ಭಕ್ತ ಕನಕದಾಸರ ಸಮಾನತೆ, ಭಕ್ತಿ, ಮಾನವೀಯತೆ ಹಾಗೂ ಸಾಮಾಜಿಕ ಸಾಮರಸ್ಯದ ಸಂದೇಶಗಳನ್ನು ಸ್ಮರಿಸುವ ಈ ಜಯಂತಿ ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು, ಸಾರ್ವಜನಿಕರು ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ತಾಲೂಕು ಆಡಳಿತ ಮನವಿ ಮಾಡಿದೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande