ಶೌಚಾಲಯ ಬಳಕೆ ಜಾಗೃತಿ ಕಾರ್ಯಕ್ರಮದಲ್ಲಿ ಸಂವಿಧಾನ ದಿನಾಚರಣೆ: ವಿದ್ಯಾರ್ಥಿಗಳಿಂದ ಸಂವಿಧಾನದ ಪೀಠಿಕೆ ವಾಚನ
ಬಾಗಲಕೋಟೆ , 26 ನವೆಂಬರ್ (ಹಿ.ಸ.) ಬಾದಾಮಿ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ, ಚಾಣಕ್ಯ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಶೌಚಾಲಯ ಬಳಕೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮ
ಶೌಚಾಲಯ


ಬಾಗಲಕೋಟೆ , 26 ನವೆಂಬರ್ (ಹಿ.ಸ.)

ಬಾದಾಮಿ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ, ಚಾಣಕ್ಯ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಆರೋಗ್ಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಶೌಚಾಲಯ ಬಳಕೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು ವ್ಯವಸ್ಥಾಪಕ ನಿರಂಜನ ತಿಳಿಸಿದರು

ಕಾರ್ಯಕ್ರಮದ ಅಂಗವಾಗಿ ನವೆಂಬರ್ 26ರ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಸಾಮೂಹಿಕವಾಗಿ ಭಾರತದ ಸಂವಿಧಾನದ ಪೀಠಿಕೆಯನ್ನು ವಾಚಿಸುವ ಮೂಲಕ ಸಂವಿಧಾನದ ಆಶಯಗಳನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಸಂವಿಧಾನದ ಮೂಲ ಆಶಯಗಳಾದ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಸಹೋದರತ್ವದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಲಾಯಿತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ, ಹಕ್ಕುಗಳು ಹಾಗೂ ಕರ್ತವ್ಯಗಳ ಕುರಿತು ಅರಿವು ಮೂಡಿಸಲಾಯಿತು.

ಇದೇ ವೇಳೆ ಶೌಚಾಲಯ ಬಳಕೆಯ ಮಹತ್ವ, ವೈಯಕ್ತಿಕ ಸ್ವಚ್ಛತೆ, ಪರಿಸರ ನೈರ್ಮಲ್ಯ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಪ್ರತಿಯೊಂದು ಮನೆಯಲ್ಲಿಯೂ ಶೌಚಾಲಯ ಬಳಕೆಯ ಅಭ್ಯಾಸ ಬೆಳೆಸಿಕೊಳ್ಳುವ ಮೂಲಕ ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಜಾಗೃತಿ ಮೂಡಿಸಲಾಯಿತು.

ಸಂವಿಧಾನದ ಮೌಲ್ಯಗಳ ಅರಿವಿನೊಂದಿಗೆ ಸ್ವಚ್ಛತೆ ಮತ್ತು ಆರೋಗ್ಯದ ಮಹತ್ವವನ್ನು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಗೆ ತಿಳಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಬಾದಾಮಿ ತಾಲೂಕು ಹಿರಿಯ ಆರೋಗ್ಯ ಅಧಿಕಾರಿ ಪ್ರಭು ಮಹಾಲಿಂಗಪುರ, ಸಾಮಾಜಿಕ ಹೋರಾಟಗಾರ ಹುಲ್ಲಪ್ಪ ಭೋವಿ, ನದಾಫ್ ಮೇಡಂ, ಶಾಲೆಯ ಮುಖ್ಯಗುರುಗಳು, ಸಮುದಾಯ ಆರೋಗ್ಯ ಅಧಿಕಾರಿಗಳು, ವೆಂಕನಗೌಡ ಪಾಟೀಲ, ಆರೋಗ್ಯ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಗ್ರಾಮದ ಗುರುಹಿರಿಯರು ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande