ನ.30ರಂದು ಬಳ್ಳಾರಿಯಲ್ಲಿ ಕಾರ್ಮಿಕ ಸಮುದಾಯ ಭವನ ಉದ್ಘಾಟನೆ
ಬಳ್ಳಾರಿ, 26 ನವೆಂಬರ್ (ಹಿ.ಸ.) ಕಾರ್ಮಿಕ ಇಲಾಖೆ ಮತ್ತು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಬಳ್ಳಾರಿ ನಗರದ ಗುಗ್ಗರಹಟ್ಟಿಯ ಬೈಪಾಸ್ ರಸ್ತೆಯಲ್ಲಿ ನಿರ್ಮಿಸಲಾಗಿರುವ ಕಾರ್ಮಿಕ ಸಮುದಾಯ ಭವನದ ಉದ್ಘಾಟನಾ ಸಮಾರಂಭ ನವೆಂಬರ್ 30ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಕಾರ್ಮಿಕ ಸಚಿವ ಸಂತೋಷ್ ಎಸ
ಬಳ್ಳಾರಿ: ನ. 30ರಂದು ಕಾರ್ಮಿಕ ಭವನ ಉದ್ಘಾಟನೆ


ಬಳ್ಳಾರಿ: ನ. 30ರಂದು ಕಾರ್ಮಿಕ ಭವನ ಉದ್ಘಾಟನೆ


ಬಳ್ಳಾರಿ, 26 ನವೆಂಬರ್ (ಹಿ.ಸ.)

ಕಾರ್ಮಿಕ ಇಲಾಖೆ ಮತ್ತು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಬಳ್ಳಾರಿ ನಗರದ ಗುಗ್ಗರಹಟ್ಟಿಯ ಬೈಪಾಸ್ ರಸ್ತೆಯಲ್ಲಿ ನಿರ್ಮಿಸಲಾಗಿರುವ ಕಾರ್ಮಿಕ ಸಮುದಾಯ ಭವನದ ಉದ್ಘಾಟನಾ ಸಮಾರಂಭ ನವೆಂಬರ್ 30ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಅವರು ಭವನ ಉದ್ಘಾಟಿಸಲಿದ್ದು, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಂಸದರಾದ ಈ. ತುಕಾರಾಮ್, ಕೆ. ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭಾ ಸದಸ್ಯ ಡಾ. ಸೈಯದ್ ನಾಸೀರ್ ಹುಸೇನ್, ಶಾಸಕರಾದ ಜೆ.ಎನ್. ಗಣೇಶ್, ಬಿ. ನಾಗೇಂದ್ರ, ಬಿ.ಎಂ. ನಾಗರಾಜ, ಈ. ಅನ್ನಪೂರ್ಣ ಸೇರಿದಂತೆ ವಿಧಾನಪರಿಷತ್ ಸದಸ್ಯರು ಹಾಗೂ ವಿವಿಧ ನಿಗಮಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ.

ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಕಾರ್ಮಿಕ ಆಯುಕ್ತೆ ರಾಗಪ್ರಿಯಾ ಆರ್., ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande