ನ.೨೮ರಂದು ಹಲಕುಂದಿಯಲ್ಲಿ ಪ್ರಜಾಸೇವೆ ಆಂದೋಲನ
ಬಳ್ಳಾರಿ, 26 ನವೆಂಬರ್ (ಹಿ.ಸ.) ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಲಕುಂದಿ ಗ್ರಾಮದಲ್ಲಿ ಇದೇ ನವೆಂಬರ್ 28ರಂದು ‘ಪ್ರಜಾಸೇವೆ ಆಂದೋಲನ'' ಸಭೆಯನ್ನು ಆಯೋಜಿಸಲಾಗಿದೆ. ರಾಜ್ಯಾದ್ಯಂತ ಪ್ರಜಾಸೇವೆ ಅಭಿಯಾನ ಸಭೆಗಳನ್ನು ಹಮ್ಮಿಕೊಳ್ಳಲು ಸೂಚಿಸಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ನಡೆಯು
ನ.೨೮ರಂದು ಹಲಕುಂದಿಯಲ್ಲಿ ಪ್ರಜಾಸೇವೆ ಆಂದೋಲನ


ಬಳ್ಳಾರಿ, 26 ನವೆಂಬರ್ (ಹಿ.ಸ.)

ಬಳ್ಳಾರಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಹಲಕುಂದಿ ಗ್ರಾಮದಲ್ಲಿ ಇದೇ ನವೆಂಬರ್ 28ರಂದು ‘ಪ್ರಜಾಸೇವೆ ಆಂದೋಲನ' ಸಭೆಯನ್ನು ಆಯೋಜಿಸಲಾಗಿದೆ.

ರಾಜ್ಯಾದ್ಯಂತ ಪ್ರಜಾಸೇವೆ ಅಭಿಯಾನ ಸಭೆಗಳನ್ನು ಹಮ್ಮಿಕೊಳ್ಳಲು ಸೂಚಿಸಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಬಳ್ಳಾರಿ ತಾಲೂಕಿನ ಮಿಂಚೇರಿ ರಸ್ತೆಯ ಹಲಕುಂದಿ ಗ್ರಾಮದ ಪೋತಪ್ಪನ ಕಟ್ಟೆ ಹತ್ತಿರದ ಸಮುದಾಯ ಭವನದಲ್ಲಿ ನ. 28ರ ಬೆಳಿಗ್ಗೆ 10 ಗಂಟೆಗೆ ಶಾಸಕ ಬಿ. ನಾಗೇಂದ್ರ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಲಿದೆ.

ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸಭೆಯ ಸದುಪಯೋಗ ಪಡೆದುಕೊಳ್ಳುವಂತೆ ಬಳ್ಳಾರಿ ತಹಶೀಲ್ದಾರರು ಮನವಿ ಮಾಡಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande