ಸಂವಿಧಾನ ದಿನಾಚರಣೆ: ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಶಾಸಕ ಉಮೇಶ ಮೇಟಿ ಗೌರವ ನಮನ
ಬಾಗಲಕೋಟೆ , 26 ನವೆಂಬರ್ (ಹಿ.ಸ.) ಸಂವಿಧಾನ ದಿನಾಚರಣೆಯ ಅಂಗವಾಗಿ ಬಾಗಲಕೋಟೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಉಮೇಶ್ ಮೇಟಿ ಅವರು, ಭಾರತದ ಸಂವಿಧಾನವ
ಸಂವಿಧಾನ ದಿನ


ಬಾಗಲಕೋಟೆ , 26 ನವೆಂಬರ್ (ಹಿ.ಸ.)

ಸಂವಿಧಾನ ದಿನಾಚರಣೆಯ ಅಂಗವಾಗಿ ಬಾಗಲಕೋಟೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಉಮೇಶ್ ಮೇಟಿ ಅವರು, ಭಾರತದ ಸಂವಿಧಾನವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಹಾಗೂ ಸಹೋದರತ್ವದ ಮೌಲ್ಯಗಳನ್ನು ಕಲ್ಪಿಸಿದೆ ಎಂದು ತಿಳಿಸಿದರು.

ನಂತರ ನಡೆದ ಭಾರತ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಂವಿಧಾನದ ಆಶಯಗಳು ಮತ್ತು ಮೂಲಭೂತ ಮೌಲ್ಯಗಳನ್ನು ಎತ್ತಿಹಿಡಿಯುವ ಸಂಕಲ್ಪ ಮಾಡಲಾಯಿತು ಎಂದು ಉಮೇಶ್ ಮೇಟಿ ತಿಳಿಸಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ದೂರದೃಷ್ಟಿ, ಪರಿಶ್ರಮ ಹಾಗೂ ದೇಶಕ್ಕೆ ನೀಡಿದ ಅಮೂಲ್ಯ ಕೊಡುಗೆಯನ್ನು ಸ್ಮರಿಸುವ ಮೂಲಕ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande